ಬಿಪಾಶಾ ಬಸು ಮುಂಬೈ ಆಸ್ಪತ್ರೆಗೆ ದಾಖಲು

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬಾಲಿವುಡ್ ನಟಿ ಬಿಪಾಶಾ ಬಸು ಅವರು ಸೋಮವಾರ ಮುಂಬೈ ಆಸ್ಪತ್ರೆಗೆ...
ಬಿಪಾಶಾ ಬಸು
ಬಿಪಾಶಾ ಬಸು
ಮುಂಬೈ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬಾಲಿವುಡ್ ನಟಿ ಬಿಪಾಶಾ ಬಸು ಅವರು ಸೋಮವಾರ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬಿಪಾಶಾ ಬಸು ಅವರು ಕಳೆದ ಕೆಲ ದಿನಗಳಿಂದ ಆಗಾಗ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ಆಸ್ಪತ್ರೆಯಲ್ಲೇ ದಾಖಲಾಗಿದ್ದಾರೆ.
ಬಿಪಾಶಾ ಆರೋಗ್ಯದ ಬಗ್ಗೆ ಆಕೆಯ ಕುಟುಂಬದವರಾಗಲೀ ಅಥವಾ ಸ್ನೇಹಿತರಾಗಲಿ ಅಧಿಕೃತವಾಗಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಸದ್ಯ ಬಿಪಾಶಾ ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com