ಜೀರೋ ಚಿತ್ರದಲ್ಲಿನ ಶಾರುಖ್ ಕುಬ್ಜನ ಪಾತ್ರಕ್ಕೆ ಅಭಿಮಾನಿಗಳು ಫಿದಾ!

ಈದ್ ವಿಶೇಷ ಎಂಬಂತೆ ಬಾಲಿವುಡ್ ನಟ ಬಾದ್ಶಾ ಶಾರುಖ್ ಖಾನ್ ಅಭಿನಯದ ಜೀರೋ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಒಂದೇ...
ಸಲ್ಮಾನ್ ಖಾನ್-ಶಾರುಖ್ ಖಾನ್
ಸಲ್ಮಾನ್ ಖಾನ್-ಶಾರುಖ್ ಖಾನ್
ಈದ್ ವಿಶೇಷ ಎಂಬಂತೆ ಬಾಲಿವುಡ್ ನಟ ಬಾದ್ಶಾ ಶಾರುಖ್ ಖಾನ್ ಅಭಿನಯದ ಜೀರೋ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಒಂದೇ ಫ್ರೇಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಶಾರುಖ್ ಖಾನ್ ಜೀರೋ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಈದ್ ಸಿಹಿ ಬಹಳ ಖಾರವಾಗಿರುವುದು ಖಂಡಿತ. ಎಲ್ಲರಿಗೂ ನನ್ನ ಕಡೆಯಿಂದ ಈದ್ ಶುಭಾಶಯಗಳು. ಲವ್ ಯು ಆಲ್ ಎಂದು ಬರೆದುಕೊಂಡಿದ್ದಾರೆ. 
ಶಾರುಖ್ ಖಾನ್ ಈ ಮೊದಲು ಎಂದೂ ಮಾಡಿರದ ಪಾತ್ರವನ್ನು ಜೀರೋ ಚಿತ್ರದಲ್ಲಿ ಮಾಡಿದ್ದಾರೆ. ಚಿತ್ರದಲ್ಲಿ ಶಾರುಖ್ ಕುಬ್ಜನ ರೀತಿ ಕಾಣಿಸಿಕೊಂಡಿದ್ದಾರೆ. ಶಾರುಖ್ ಪಾತ್ರ ನೋಡಿದ ಅಭಿಮಾನಿಗಳು ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. 
ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಬ್ಯಾನರ್ ಮೂಲದ ಆನಂದ್ ಎಲ್ ರಾಯ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಹಾಗೂ ಕತ್ರಿನಾ ಕೈಫ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಚಿತ್ರ ಇದೇ ವರ್ಷ ಡಿಸೆಂಬರ್ 21ರಂದು ಚಿತ್ರ ಬಿಡುಗಡೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com