ತಂದೆ ಆಗ್ತಿದ್ದಾರಾ ವಿರಾಟ್ ಕೊಹ್ಲಿ? ನಟಿ ಅನುಷ್ಕಾ ಬೇಬಿ ಬಂಪ್ ಫೋಟೋ ವೈರಲ್!

ಟೀಂ ಇಂಡಿಯಾ ವಿರಾಟ್ ಕೊಹ್ಲಿ ತಂದೆ ಆಗುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಫೋಟೋ ವೈರಲ್ ಆಗಿದ್ದು ವಿರುಷ್ಕಾ...
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
ಮುಂಬೈ: ಟೀಂ ಇಂಡಿಯಾ ವಿರಾಟ್ ಕೊಹ್ಲಿ ತಂದೆ ಆಗುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಫೋಟೋ ವೈರಲ್ ಆಗಿದ್ದು ವಿರುಷ್ಕಾ ನಿಜವಾಗಿಯೂ ತಂದೆ-ತಾಯಿ ಆಗುತ್ತಿದ್ದಾರಾ ಎಂಬ ಕುತೂಹಲ ಎಲ್ಲರಿಗೂ ಮೂಡಿದೆ. 
ಸಾಮಾಜಿಕ ಜಾಲತಾಣದಲ್ಲಿ ನಟಿ ಅನುಷ್ಕಾ ಶರ್ಮಾ ಅವರ ಒಂದು ಫೋಟೋ ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಅನುಷ್ಕಾ ಗರ್ಭಿಣಿ ರೀತಿ ಕಾಣಿಸುತ್ತಿದೆ. ಹಾಗಾಗಿ ಅಭಿಮಾನಿಗಳು ವಿರುಷ್ಕಾ ತಂದೆ-ತಾಯಿ ಆಗುತ್ತಿದ್ದಾರೆ ಎಂದು ಖುಷಿಯಲ್ಲಿದ್ದಾರೆ. 
ವಿರುಷ್ಕಾ ಜೋಡಿ ಕಳೆದ ವರ್ಷ ಡಿಸೆಂಬರ್ 11ರಂದು ಇಟಲಿಯ ಟಸ್ಕನಿ ನಗರದ ಬೋಗೋ ಫಿನೊಕಿಯೆಟೊ ಎಂಬ ದುಬಾರಿ ರೆಸಾರ್ಟ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com