ಡ್ರಗ್ಸ್ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ, ಬಾಲಿವುಡ್ ನಟ ಅಜಾಜ್ ಖಾನ್ ಬಂಧನ

ನಿಷೇಧಿತ ಡ್ರಗ್ಸ್ ಸೇವನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿದೆ.
ಅಜಾಜ್ ಖಾನ್
ಅಜಾಜ್ ಖಾನ್
Updated on
ಮುಂಬೈ:ನಿಷೇಧಿತ ಡ್ರಗ್ಸ್ ಸೇವನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿದೆ. ನವಿ ಮುಂಬೈನ ಮಾದಕ ದ್ರವ್ಯ ನಿಯಂತ್ರಣ ದಳ ಪೋಲೀಸರು ನಟನನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ರಾತ್ರಿ ಅಜಾಜ್ ಬಂಧನವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈನ ಪ್ರಸಿದ್ಧ ಹೋಟೆಲ್‌ ಮೇಲೆ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ ನಟನನ್ನು ಬಂಧಿಸಿದ್ದು ಬಂಧಿತನಿಂದ 2.3 ಗ್ರಾಂ ನಿಷೇಧಿತ ಎಂ/ಡಿ ಮಾತ್ರೆಗಳು, ಸೈಕೋಟ್ರೋಪಿಕ್ ಪದಾರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಅಜಾಜ್ ಖಾನ್ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಷ್ಟಕ್ಕೂ ಇದು ಅಜಾಜ್ ಖಾನ್ ಸಿಕ್ಕಿಹಾಕಿಕೊಳ್ಳುತ್ತಿರುವುದು ಮೊದಲೇನೂ ಅಲ್ಲ. ಇದಕ್ಕೆ ಎರಡು ವರ್ಷಗಳ ಹಿಂದೆ ಅಶ್ಲೀಲ ಚಿತ್ರ, ಸುಳ್ಳು ಸಾಂದೇಶಗಳನ್ನು ಕಳುಹಿಸುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.  ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com