ಈ ವಿಷಯದಲ್ಲಿ ಭಾಗಿಯಾದ ವ್ಯಕ್ತಿಗಳು ತಮ್ಮ ದೃಷ್ಟಿಕೋನದಲ್ಲಿ ಮಾತನಾಡಿದ್ದಾರೆ. ಆದರೆ ಅದು ನಮ್ಮ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಆಗಿರುವುದರಿಂದ ಚಿತ್ರದ ನಿರ್ಮಾಪಕರಾಗಿ ನಾವು ಈ ಘಟನೆಗೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸುತ್ತಿದ್ದು ಕ್ಷಮೆ ಕೋರುತ್ತಿದ್ದೇವೆ. ಯಾರ ಭಾವನೆಗಳಿಗೂ ನೋವುಂಟುಮಾಡುವುದು ಮತ್ತು ಯಾರಿಗೂ ಅಗೌರವ ತೋರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.