ಕೊನೆಗೂ ತೆರೆ ಮೇಲೆ ಪ್ರಧಾನಿ ಮೋದಿ ಬಯೋಪಿಕ್, ಬಿಡುಗಡೆ ಯಾವಾಗ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಬಹು ನಿರೀಕ್ಷಿತ ಚಿತ್ರ 'ಪಿಎಂ ನರೇಂದ್ರ ಮೋದಿ' ಚಿತ್ರಕ್ಕೆ ಕೊನೆಗೂ ಬಿಡುಗಡೆ ಭಾಗ್ಯ ಲಭಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಬಹು ನಿರೀಕ್ಷಿತ ಚಿತ್ರ 'ಪಿಎಂ ನರೇಂದ್ರ ಮೋದಿ' ಚಿತ್ರಕ್ಕೆ ಕೊನೆಗೂ ಬಿಡುಗಡೆ ಭಾಗ್ಯ ಲಭಿಸಿದೆ.
ಹೌದು.. ಚುನಾವಣೆ ಮತ್ತು ವಿವಿಧ ರಾಜಕೀಯ ಕಾರಣಗಳಿಂದಾಗಿ ಪದೇ ಪದೇ ಮುಂದೂಡಲ್ಪಡುತ್ತಿದ್ದ ಪಿಎಂ ನರೇಂದ್ರ ಮೋದಿ ಚಿತ್ರ ಕೊನೆಗೂ ತನ್ನ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಇದೇ ಮೇ 24ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ  ನಿರ್ಮಾಪಕ ಪ್ರದೀಪ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಮೇ 24ರಂದು ಅಂದರೆ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಪಿಎಂ ನರೇಂದ್ರ ಮೋದಿ ಚಿತ್ರ  ತೆರೆಕಾಣಲಿದೆ ಎಂದು ಹೇಳಿದ್ದಾರೆ. ಅಂತೆಯೇ ರಾಜಕೀಯವಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿರುವ ಚಿತ್ರ ಥಿಯೇಟರ್ ಗಳಲ್ಲಿ ಯಶಸ್ವೀ ಪ್ರದರ್ಶನ ಕಾಣಲಿದೆ ಎಂದು ಪ್ರದೀಪ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಚಿತ್ರ ಬಿಡುಗಡೆ ವಿವಾದದ ಕುರಿತು ಮಾತನಾಡಿದ ಅವರು, ಈ ದೇಶದ ಕಾನೂನಿಗೆ ನಾವು ಗೌರವ ಕೊಡಬೇಕು. ಹೀಗಾಗಿ ಸಾಕಷ್ಟು ಚರ್ಚೆಗಳ ಬಳಿಕ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಮಾರನೆಯ ದಿನವೇ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ಈ ನೂತನ ಬಿಡುಗಡೆ ದಿನಾಂಕದ ಕುರಿತಂತೆ ಯಾರಿಗೂ ಆಕ್ಷೇಪವಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಈ ಚಿತ್ರದಲ್ಲಿ ಪ್ರಧಾನಿ ಮೋದಿ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅಭಿನಯಿಸಿದ್ದು, ಚಿತ್ರದಲ್ಲಿ ಬೊಮ್ಮನ್ ಇರಾನಿ, ಮನೋಜ್ ಜೋಷಿ, ಪ್ರಶಾಂತ್ ನಾರಾಯಣನ್, ಜರೀನಾ ವಹಾಬ್, ಬರ್ಖಾ ಸೇನ್ ಗುಪ್ತಾ ಮತ್ತು ದರ್ಶನ್ ಕುಮಾರ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com