ಲತಾ ಮಂಗೇಶ್ಕರ್
ಬಾಲಿವುಡ್
ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ: ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
90 ವರ್ಷದ ಲತಾ ಮಂಗೇಶ್ಕರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲತಾ ಮಂಗೇಶ್ಕರ್ ಅವರು ಹಿಂದಿ ಸೇರಿದಂತೆ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿದ್ದಾರೆ.


