ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್ 

ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಆರೋಗ್ಯ ತಪಾಸಣೆಗೆ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್
Updated on: 

ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಆರೋಗ್ಯ ತಪಾಸಣೆಗೆ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ಎಂದಿನ ಆರೋಗ್ಯ ತಪಾಸಣೆಗೆ ಅಮಿತಾಬ್ ಬಚ್ಚನ್ ಮಂಗಳವಾರ ಆಸ್ಪತ್ರೆಗೆ ಬಂದಿದ್ದರು ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಪಿತ್ತಜನಕಾಂಗ ಸಮಸ್ಯೆಯಿಂದ ಬಚ್ಚನ್ ಅವರು ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ಬಗ್ಗೆ ಸ್ಪಷ್ಟ ಸುದ್ದಿ ಸಿಕ್ಕಿಲ್ಲ. 


ನಿನ್ನೆ ಕರ್ವ ಚೌತ ಹಬ್ಬದ ಸಲುವಾಗಿ ಅಮಿತಾಬ್ ಬಚ್ಚನ್ ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ. ಕಳೆದ 11ರಂದು ತಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ 77ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com