ಏಪ್ರಿಲ್ 11ಕ್ಕೆ 'ಪಿಎಂ ನರೇಂದ್ರ ಮೋದಿ' ಚಿತ್ರ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರ ಬಿಡುಗಡೆಗೆ ಕೊನೆಗೂ ಮಹೂರ್ತ ಫಿಕ್ಸ್ ಆಗಿದ್ದು, ಇದೇ ಏಪ್ರಿಲ್ 11ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸಂದೀಪ್​ ಸಿಂಗ್ ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರ ಬಿಡುಗಡೆಗೆ ಕೊನೆಗೂ ಮಹೂರ್ತ ಫಿಕ್ಸ್ ಆಗಿದ್ದು, ಇದೇ ಏಪ್ರಿಲ್ 11ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸಂದೀಪ್​ ಸಿಂಗ್ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಚಿತ್ರವನ್ನು ಏಪ್ರಿಲ್ 5ರಂದು ತೆರೆ ಮೇಲೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದರು. ಆದರೆ ಸೆನ್ಸಾರ್ ಮಂಡಳಿ ಇನ್ನೂ ಸಿನಿಮಾದ ಪರಿಶೀಲನೆ ನಡೆಸುತ್ತಿರುವ ಕಾರಣ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಸಂದೀಪ್​ ಸಿಂಗ್​ ತಿಳಿಸಿದ್ದರು. ಇದೀಗ ಮತ್ತೆ ಟ್ವೀಟ್​ ಮಾಡಿರುವ ಅವರು, ಸಿನಿಮಾ ಏ.11ರಂದು ತೆರೆಗೆ ಬರಲಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ‘ಪಿಎಂ ನರೇಂದ್ರ ಮೋದಿ’ ಬಿಡುಗಡೆಗೆ ಚುನಾವಣಾ ಆಯೋಗವೂ ವಿರೋಧ ವ್ಯಕ್ತಪಡಿಸಿತ್ತು. ಹಾಗೆಯೇ ಈ ಚಿತ್ರ ತೆರೆಗೆ ಬರಲು ಅವಕಾಶ ಮಾಡಿಕೊಡಬಾರದು ಎಂದು ದೆಹಲಿ, ಬಾಂಬೆ, ಮಧ್ಯಪ್ರದೇಶ, ಕರ್ನಾಟಕ ಹೈಕೋರ್ಟ್ ​ಗಳಲ್ಲಿ ಕೂಡ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಎಲ್ಲ ಹೈಕೋರ್ಟ್​ ಗಳೂ ಅರ್ಜಿ ವಜಾಗೊಳಿಸಿದ್ದು ಸಿನಿಮಾ ಬಿಡುಗಡೆಗೆ ಅಸ್ತು ಎಂದಿವೆ.
ಒಮಂಗ್​ ಕುಮಾರ್​ ನಿರ್ದೇಶಿಸಿರುವ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ ಸಿನಿಮಾದಲ್ಲಿ ವಿವೇಕ್​ ಒಬೆರಾಯ್ ಮೋದಿ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಮೋದಿ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಕೆರಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com