‘ಪಿಎಂ ನರೇಂದ್ರ ಮೋದಿ’ ಚಿತ್ರಕ್ಕಿದ್ದ ವಿಘ್ನ ನಿವಾರಣೆ: ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.
‘ಪಿಎಂ ನರೇಂದ್ರ ಮೋದಿ’
‘ಪಿಎಂ ನರೇಂದ್ರ ಮೋದಿ’
ನವದೆಹಲಿ: ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.ಚಲನಚಿತ್ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂಬುದಾಗಿ ನ್ಯಾಯಾಲಯ ಹೇಳಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸೋಮವಾರ ಕೋರ್ಟ್ ಸೂಚಿಸಿತ್ತು.  ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಕಾಂಗ್ರೆಸ್ ನ ಕಾರ್ಯಕರ್ತ ಅಮನ್ ಪನ್ವಾರ್ ಅವರ ಅರ್ಜಿಯನ್ನು ತಿರಸ್ಕರಿಸಿತು.
"ನಾವು ಚಲನಚಿತ್ರವನ್ನು ನೋಡಿಲ್ಲ. ಚಿತ್ರದ ವಿಷಯಗಳನ್ನು ನಾವು ತಿಳಿದಿಲ್ಲ. ನಮಗೇನೂ ಗೊತ್ತಿಲ್ಲದೆ ನಾವು ಹೇಗೆ ಚಿತ್ರ ಬಿಡುಗಡೆಗೆ ತಡೆ ನೀಡುವುದು?ಮುಖ್ಯ ನ್ಯಾಯಮೂರ್ತಿ ಗೊಗೊಯ್ ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com