ಮೂರೇ ತಿಂಗಳಲ್ಲಿ ಸಿದ್ಧವಾಯ್ತು ಮೋದಿ ಬಯೋಪಿಕ್​; ರಿಲೀಸ್ ಯಾವಾಗ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್ ಗಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಹೊತ್ತಿನಲ್ಲೇ ಚಿತ್ರತಂಡ ಸಿಹಿ ಸುದ್ದಿ ನೀಡಿದೆ.

Published: 16th March 2019 12:00 PM  |   Last Updated: 16th March 2019 11:22 AM   |  A+A-


Confirmed: PM Narendra Modi biopic to release on April 12

ಪಿಎಂ ನರೇಂದ್ರ ಮೋದಿ ಬಯೋಪಿಕ್

Posted By : SVN
Source : Online Desk
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್ ಗಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಹೊತ್ತಿನಲ್ಲೇ ಚಿತ್ರತಂಡ ಸಿಹಿ ಸುದ್ದಿ ನೀಡಿದೆ.

ಹೌದು.. ನರೇಂದ್ರ ಮೋದಿ ಅವರ ಬಯೋಪಿಕ್ ರಿಲೀಸ್ ಗೆ ಸಿದ್ಧವಾಗಿದ್ದು, ಚಿತ್ರದ ಶೂಟಿಂಗ್​​ ಪೂರ್ಣಗೊಂಡಿದೆ. ಅಂತೆಯೇ  ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಚಾಲನೆ ನೀಡಲಾಗಿದ್ದು, ಇದೇ ಏಪ್ರಿಲ್ 12ರಂದು ಚಿತ್ರ ತೆರೆಕಾಣಲಿದೆ ಎಂದು ಚಿತ್ರ ತಂಡ ಹೇಳಿದೆ. 

ಈ ಬಗ್ಗೆ ಖ್ಯಾತ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದು, ಚಿತ್ರ ಏಪ್ರಿಲ್ 12ರಂದು ತೆರೆ ಕಾಣಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಚಿತ್ರಕ್ಕೆ ಒಮಂಗ್ ಕುಮಾರ್ ಅವರು ನಿರ್ದೇಶನ ಮಾಡಿದ್ದು, ಸಂದೀಪ್ ಸಿಂಗ್. ಆನಂದ್ ಪಂಡಿತ್, ಸುರೇಶ್ ಒಬೆರಾಯ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಲುಕ್ ಕೂಡ ಈ ಹಿಂದೆ ರಿಲೀಸ್​ ಆಗಿತ್ತು. 

ಆದರೆ, ಸಾಕಷ್ಟು ಕೆಲಸಗಳು ಬಾಕಿ ಇರುವುದರಿಂದ ಈ ಸಿನಿಮಾ ಲೋಕಸಭಾ ಚುನಾವಣೆಗೆ ಮೊದಲು ತೆರೆಕಾಣುವುದಿಲ್ಲ ಎಂದೇ ಹೇಳಲಾಗಿತ್ತು. ಆದರೆ, ಸಿನಿಮಾದ ಶೂಟಿಂಗ್​​ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಏ.12ರಂದು ಚಿತ್ರ ತೆರೆಗೆ ಬರುತ್ತಿದೆ. ಅಂತೆಯೇ ಚುನಾವಣೆ ಸಮಯದಲ್ಲೇ ಮೋದಿ ಬಯೋಪಿಕ್​ ಬಿಡುಗಡೆ ಆಗುತ್ತಿರುವುದಕ್ಕೆ ವಿವಾದ ಸೃಷ್ಟಿಯಾಗುವ ಲಕ್ಷಣ ಗೋಚರವಾಗಿದೆ. 

Stay up to date on all the latest ಬಾಲಿವುಡ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp