ವೋಟ್ ಮಾಡದ ಬಗ್ಗೆ ಕೇಳಿದ್ದಕ್ಕೆ ಅಕ್ಷಯ್ ಕುಮಾರ್ ಕೊಟ್ಟ ಉತ್ತರ ಏನು ಗೊತ್ತಾ?

ಸದಾ ದೇಶಭಕ್ತಿ ಮತ್ತು ದೇಶ ಪ್ರೇಮದ ಬಗ್ಗೆ ಮಾತನಾಡುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ನಡೆದ ನಾಲ್ಕನೇ...

Published: 01st May 2019 12:00 PM  |   Last Updated: 01st May 2019 05:13 AM   |  A+A-


Akshay Kumar gives 'sarcastic reply' to journalist who questioned his absence from voting

ಅಕ್ಷಯ್ ಕುಮಾರ್

Posted By : LSB LSB
Source : PTI
ಮುಂಬೈ: ಸದಾ ದೇಶಭಕ್ತಿ ಮತ್ತು ದೇಶ ಪ್ರೇಮದ ಬಗ್ಗೆ ಮಾತನಾಡುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ನಡೆದ ನಾಲ್ಕನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೇ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಜತೆ ರಾಜಕೀಯೇತರ ಸಂವಾದ ನಡೆಸಿ ಸುದ್ದಿಯಾಗಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್, ಸೋಮವಾರ ಮುಂಬೈಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದ್ದಕ್ಕೆ ಟ್ರೋಲ್ ಆಗುತ್ತಿದ್ದಾರೆ.

ಇಂದು ಬ್ಲ್ಯಾಂಕ್ ಚಿತ್ರದ ವಿಶೇಷ ಪ್ರದರ್ಶನದ ವೇಳೆ ಪತ್ರಕರ್ತರೊಬ್ಬರು ಮತದಾನ ಮಾಡದಿರುವ ಬಗ್ಗೆ ಅಕ್ಷಯ್ ಕುಮಾರ್ ಅವರನ್ನು ಪ್ರಶ್ನಿಸಿದ್ದು, ಇದಕ್ಕೆ ನಟ ಸುಮ್ಮನೆ ನಕ್ಕು ಚಲಿಯೆ ಚಲಿಯೇ ಎಂದು ಹೇಳಿ ಹೊರ ನಡೆದಿದ್ದಾರೆ.

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನದಲ್ಲಿ ಬಾಲಿವುಡ್ ನ ಐಶ್ವರ್ಯಾ ರೈ, ಅಜಯ್ ದೇವಗನ್, ಕಾಜಲ್, ಪ್ರಿಯಾಂಕ ಚೋಪ್ರಾ, ಕರೀನಾ ಕಪೂರ್, ಅನುಷ್ಕಾ ಶರ್ಮಾ ಸೇರಿದಂತೆ ಸಾಕಷ್ಟು ನಟ-ನಟಿಯರು ವೋಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ವೋಟ್ ಮಾಡಿ ಶಾಹಿ ಹಾಕಿರುವ ಬೆರಳನ್ನು ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಅಕ್ಷಯ್ ಕುಮಾರ್ ಎಲ್ಲಿ? ಅವರು ವೋಟ್ ಮಾಡಿಲ್ವಾ? ವೋಟ್ ಮಾಡಲು ನಿಮ್ಮ ಪತಿಯನ್ನು ಕರೆದುಕೊಂಡು ಹೋಗಿಲ್ವಾ? ಎಂದೆಲ್ಲಾ ಪ್ರಶ್ನಿಸುತ್ತಿದ್ದಾರೆ. 
Stay up to date on all the latest ಬಾಲಿವುಡ್ news with The Kannadaprabha App. Download now
facebook twitter whatsapp