ಕದಿಯೋ ಪ್ಲಾನ್ ಮಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಾಂಕಾ ಚೋಪ್ರಾ, ಪೊಲೀಸರು ವಾರ್ನ್ ಮಾಡಿದ್ದೇಕೆ?

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಕದಿಯೋ ಪ್ಲಾನ್ ಮಾಡಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಈ ಸಂಬಂಧ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಕದಿಯೋ ಪ್ಲಾನ್ ಮಾಡಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಈ ಸಂಬಂಧ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಪ್ರಿಯಾಂಕಾ ಚೋಪ್ರಾ ಸದ್ಯ ಬಾಲಿವುಡ್ ನಟ ಫರ್ಹಾನ್ ಅಖ್ತರ್ ಜೊತೆ ಸ್ಕೈ ಈಸ್ ಪಿಂಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಚಿತ್ರದ ಟ್ರೈಲರ್ ಬಿಡುಗಡೆಯಾಗಿತ್ತು. ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯಾಂಕ್ ದರೋಡೆ ಮಾಡುವ ಪ್ಲಾನ್ ಮಾಡುತ್ತಾಳೆ. 

ಇದನ್ನು ಕಂಡ ಮಹಾರಾಷ್ಟ್ರ ಪೊಲೀಸರು ತಮಾಷೆಯಾಗಿ ಟ್ವೀಟ್ ಒಂದನ್ನು ಮಾಡಿದ್ದು ದರೋಡೆ ಮಾಡುವುದು ಐಪಿಸಿ ಸೆಕ್ಷನ್ 393ರ ಪ್ರಕಾರ ಅಪರಾಧ, ಈ ಕ್ರೈಂಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಚ್ಚರಿಕೆಯಿಂದಿರಿ ಎಂದು ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com