ನಿರ್ಬಂಧಗಳ ನಡುವೆ ಇರ್ಫಾನ್ ಖಾನ್ ಅಂತಿಮ ಸಂಸ್ಕಾರ, ಬಾಲಿವುಡ್ ನಟನ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ ಅವರು ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ನಟ ಇರ್ಫಾನ್ ಖಾನ್
ನಟ ಇರ್ಫಾನ್ ಖಾನ್
Updated on

ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ ಅವರು ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.

ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇದ್ದ ಕಾರಣ ಕುಟುಂಬ ಸದಸ್ಯರು ಸೇರಿದಂತೆ ಕೇವಲ 20 ಮಂದಿಗೆ ಮಾತ್ರವೇ ತ್ರ ಅಂತಿಮ ವಿಧಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ. ಅವರ ಸಂಬಂಧಿಕರು ಮತ್ತು ಆಪ್ತರು ಅಂತಿಮ ನಮನ ಸಲ್ಲಿಸಿದರು. ಒಂದರ ನಂತರ ಒಂದರಂತೆ 5-5ರ ಗುಂಪಿನಲ್ಲಿ ಅಂತಿಮ ದರ್ಶನ ಪಡೆಯಲು ಅವರಿಗೆ ಅವಕಾಶ ಕಲ್ಪಿಸಲಾಗಿತ್ತು.

ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

"ಇರ್ಫಾನ್ ಖಾನ್ ನಿಧನವು ಸಿನೆಮಾ ಜಗತ್ತಿಗೆ ಮತ್ತು ಲಕ್ಷಾಂತರ ಚಲನಚಿತ್ರ ಪ್ರಿಯರಿಗೆ ದೊಡ್ಡ ನಷ್ಟವಾಗಿದೆ ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ. . "ಖ್ಯಾತ ನಟ ಇರ್ಫಾನ್ ಖಾನ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ಅಪರೂಪದ ಪ್ರತಿಭೆ ಮತ್ತು ಅದ್ಭುತ ನಟ, ಅವರ ವೈವಿಧ್ಯಮಯ ಪಾತ್ರಗಳು ಮತ್ತು ಗಮನಾರ್ಹ ನಟನೆ ನಮ್ಮ ನೆನಪುಗಳಲ್ಲಿ ಉಳಿಯುತ್ತವೆ. ಸಿನೆಮಾ ಜಗತ್ತಿಗೆ ಮತ್ತು ಲಕ್ಷಾಂತರ ಚಲನಚಿತ್ರ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ" ಟ್ವಿಟ್ ನಲ್ಲಿ ಹೇಳಿದ್ದಾರೆ.

ಇರ್ಫಾನ್ ಖಾನ್ ಅವರ ನಿಧನಕ್ಕೆಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಇರ್ಫಾನ್ ಖಾನ್ ಅವರ ನಿಧನವು ಸಿನೆಮಾ ಮತ್ತು ರಂಗಭೂಮಿಯ ಜಗತ್ತಿಗೆಅಪಾರ ನಷ್ಟವನ್ನುಂಟುಮಾಡಿದೆ. ವಿವಿಧ ಮಾಧ್ಯಮಗಳಲ್ಲಿ ಅವರು ನೀಡಿದ ದ ಬಹುಮುಖ ಪ್ರದರ್ಶನಕ್ಕಾಗಿ ಅವರು ಸದಾ ಸ್ಮರಣೀಯರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ" ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com