ಏಷ್ಯಾದ ಟಾಪ್ 50 ಸೆಲೆಬ್ರಿಟಿ ಪಟ್ಟಿಯಲ್ಲಿ ಸೋನು ಸೂದ್ ಗೆ ಮೊದಲ ಸ್ಥಾನ

ಬ್ರಿಟನ್‌ ನ 'ಈಸ್ಟರ್ನ್ ಐ' ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದು, ನಟ ಸೋನು ಸೂದ್ ಮೊದಲ ಸ್ಥಾನದಲ್ಲಿದ್ದಾರೆ.
ಸೋನು ಸೂದ್
ಸೋನು ಸೂದ್
Updated on: 

ನವದೆಹಲಿ/ಬೆಂಗಳೂರು: ಬ್ರಿಟನ್‌ ನ 'ಈಸ್ಟರ್ನ್ ಐ' ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದು, ನಟ ಸೋನು ಸೂದ್ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಭಾರತೀಯ ಮೂಲದ ಲಿಲ್ಲಿ ಸಿಂಗ್ ಇದ್ದಾರೆ.

ಸಿನಿಮಾಗಳ ಮೂಲಕ ಮಾತ್ರವಲ್ಲದೆ, ಮಾನವೀಯ ಕಾರ್ಯಗಳಿಂದ ಭಾರಿ ಜನಮನ್ನಣೆ ಗಳಿಸಿರುವ ಸೋನು ಸೂದ್, ಏಷ್ಯಾದ ನಂಬರ್ 1 ಸೆಲೆಬ್ರಿಟಿ ಆಗಿದ್ದಾರೆ. ಸಾವಿರಾರು ಜನರ ಜೀವನದ ಮೇಲೆ ಪ್ರಭಾವ ಬೀರಿದ್ದಾರೆ.

ಈ ಕುರಿತು, ಈಸ್ಟರ್ನ್ ಐ ನ ಸಂಪಾದಕ ಅಜರ್ ನಜೀರ್, 'ಏಷ್ಯಾದ ನಂಬರ್ 1 ಸೆಲೆಬ್ರಿಟಿ ಸ್ಥಾನಕ್ಕೆ ಸೋನು ಸೂದ್ ಅರ್ಹ ವ್ಯಕ್ತಿ. ಸೋನು ಸೂದ್ ಮಾಡಿದಂತೆ ಇನ್ನಾವ ಸೆಲೆಬ್ರಿಟಿ ಸಹ ಕೊರೋನಾ ಸಮಯದಲ್ಲಿ ಸಹಾಯ ಮಾಡಿಲ್ಲ' ಎಂದಿದ್ದಾರೆ. 

'ಕಾರ್ಮಿಕರನ್ನು ಊರಿಗೆ ಕಳುಹಿಸುವುದು, ಬಡವರಿಗೆ ಹಣಕಾಸು ಸಹಾಯ, ವಿದ್ಯಾರ್ಥಿಗಳಿಗೆ ಸಹಾಯ, ಶಸ್ತ್ರಚಿಕಿತ್ಸೆಗಳಿಗೆ ಹಣಕಾಸು ಸಹಾಯ, ರೈತರಿಗೆ ಸಹಾಯ, ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಹೀಗೆ ಹಲವಾರು ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸೋನು ಸೂದ್‌ಗೆ ಬ್ರಿಟನ್‌ನ 'ಜಿನ್ ಹೆರ್ಶೋಲ್ಟ್ ಹ್ಯುಮೆನಿಟೇರಿಯನ್' ಪ್ರಶಸ್ತಿ ನೀಡಬೇಕು ಎಂದು ಹೇಳಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಯೂಟ್ಯೂಬರ್ ಲಿಲ್ಲಿ ಸಿಂಗ್ ಭಾರಿ ಜನಪ್ರಿಯರಾಗಿದ್ದು, ಭಾರತ ಮಾತ್ರವಲ್ಲದೆ, ವಿಶ್ವದ ಹಲವು ದೇಶಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಜೊತೆಗೆ ಸಹ ಅವರು ಯೂಟ್ಯೂಬ್ ವಿಡಿಯೋಗಳನ್ನು ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com