ವಿದ್ಯಾ ಬಾಲನ್ ನಟನೆಯ ‘ಶಕುಂತಲಾ ದೇವಿ’ ಚಿತ್ರ ಜುಲೈ 31ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ
ಬಾಲಿವುಡ್ ನಟಿ ವಿದ್ಯಾ ಬಾಲನ್ ಅಭಿನಯದ ‘ಶಕುಂತಲಾ ದೇವಿ’ ಹಿಂದಿ ಚಿತ್ರ ಜುಲೈ 31ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ.
ಮಾನವ ಕಂಪ್ಯೂಟರ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡದ ಶಕುಂತಲಾ ದೇವಿ ಅವರ ಜೀವನ ಆಧಾರಿತ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಮುಗಿದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಚಿತ್ರಮಂದಿರಗಳ ಪ್ರದರ್ಶನ ಸ್ಥಗಿತಗೊಂಡಿದ್ದರಿಂದ ಸಿನಿಮಾದ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿತ್ತು. ಕೊನೆಗೆ, ಚಿತ್ರ ನಿರ್ಮಾಪಕರು ಒಟಿಟಿ ವೇದಿಕೆ ಮೂಲಕ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಚಿತ್ರದಲ್ಲಿ ಶಕುಂತಲಾ ದೇವಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿದ್ಯಾ ಬಾಲನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ಸಿನಿಮಾ ಬಿಡುಗಡೆಯ ಬಗ್ಗೆ ಬರೆದುಕೊಂಡಿದ್ದಾರೆ.
1929ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಶಕುಂತಲಾ 5 ವರ್ಷ ವಯಸ್ಸಿನಲ್ಲಿದ್ದಾಗಲೇ 18 ವರ್ಷದ ವಿದ್ಯಾರ್ಥಿಗಳ ಲೆಕ್ಕವನ್ನು ಪರಿಹರಿಸಿದ್ದರು. ಆಗಲೇ ಎಲ್ಲರಿಗೂ ಅವರ ಬುದ್ಧಿಮಟ್ಟದ ಪರಿಚಯವಾಗಿದ್ದು. 1982ರಲ್ಲಿ ಶಕುಂತಲಾ ಹೆಸರು 'ದಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಸೇರ್ಪಡೆಯಾಯಿತು. ಗಣಿತ ಪಜಲ್ಸ್, ಜ್ಯೋತಿಷ್ಯ ಶಾಸ್ತ್ರದ ಬಗ್ಗೆ ಶಕುಂತಲಾ ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ. ಕಿಡ್ನಿ, ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಶಕುಂತಲಾ ದೇವಿ ಅವರು 2013ರಲ್ಲಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ