ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್

ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

ಬಾಲಿವುಡ್ ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈ: ಬಾಲಿವುಡ್ ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದು, 'ನನಗೆ ಕೊವಿಡ್​-19 ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿ ಎಲ್ಲರೂ ತಪಾಸಣೆಗೆ ಒಳಪಟ್ಟಿದ್ದಾರೆ. ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ ಕಳೆದ 10 ದಿನಗಳಲ್ಲಿ ನನ್ನನ್ನು ಭೇಟಿಯಾದ, ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೊವಿಡ್​-19 ಟೆಸ್ಟ್​ ಮಾಡಿಸಿಕೊಳ್ಳಿ ಎಂದೂ ಬಚ್ಚನ್ ಮನವಿ ಮಾಡಿದ್ದಾರೆ.

ಪುತ್ರ ಅಭಿಷೇಕ್ ಬಚ್ಚನ್
ಇನ್ನು ಅಮಿತಾಬ್ ಬಚ್ಚನ್  ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆಯಾದರೂ, ರಾತ್ರಿಯವರೆಗೂ ಅವರಿಗೆ ಏನು ಸಮಸ್ಯೆಯಾಗಿದೆ ಎಂಬುದು ಬಹಿರಂಗವಾಗಿರಲಿಲ್ಲ. ಈ ಬಗ್ಗೆ ನಾಳೆ ಬೆಳಗ್ಗೆ ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

Related Stories

No stories found.

Advertisement

X
Kannada Prabha
www.kannadaprabha.com