ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆ: ವಿದ್ಯಾ ಬಾಲನ್
ಮುಂಬೈ: ಚಿತ್ರರಂಗದಲ್ಲಿ ನಟ, ನಟಿಯರಿಗೆ ಅಪ್ರತಿಮ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಬೇಕು ಎಂಬ ತುಡಿತ ಇರುತ್ತದೆ. ಅಲ್ಲದೆ ಎಂದಾದರೂ ಅಂತಹ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಕನಸು ಕಾಣುತ್ತಿರುತ್ತಾರೆ.
ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರಿಗೂ ಸಹ ಅಂತಹ ಒಂದು ಅಪ್ರತಿಮ ಪಾತ್ರದಲ್ಲಿ ಅಭಿನಯಿಸಬೇಕು ಎಂಬ ಕನಸಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಬಾಯಿ ಬಿಟ್ಟಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ತಮ್ಮ ಚಿರಕಾಲದ ಆಸೆ ಎಂದು ವಿದ್ಯಾ ಬಾಲನ್ ಹೇಳಿದ್ದಾರೆ.
ಯಾರಾದರೂ ಉಕ್ಕಿನ ಮಹಿಳೆ ಎಂದೇ ಹೆಸರಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನ ಆಧಾರಿತ ಚಿತ್ರ ಮಾಡಿದರೆ, ಅದರಲ್ಲಿ ಮಾಜಿ ಪ್ರಧಾನಿಯ ಪಾತ್ರ ನಿರ್ವಹಿಸಬೇಕು ಎಂಬ ಆಸೆಯಿದೆ. ಅಂತಹ ದೊಡ್ಡ ಪಾತ್ರ ನಿರ್ವಹಿಸುವುದು ಸಾಮಾನ್ಯ ವಿಷಯವಲ್ಲ. ಹಾಗಾಗಿ ಆ ಪಾತ್ರ ನನ್ನ ಜೀವನದ ಕನಸು. ಆ ಕನಸು ಒಂದು ದಿನ ನನಸಾಗಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಇಂದಿರಾ ಗಾಂಧಿ ಮಹಿಳಾ ಶಕ್ತಿಗೆ ಪ್ರತಿರೂಪವಾಗಿದ್ದರು. ಹೀಗಾಗಿ ಅವರ ಬಗ್ಗೆ ತಮಗೆ ಅಪಾರ ಗೌರವ ಇದೆ ಎಂದು ವಿದ್ಯಾ ಬಾಲನ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ