ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ 

ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್  ಬಾಂದ್ರಾದಲ್ಲಿನ ತಮ್ಮ ನಿವಾಸದಲ್ಲಿಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 34 ವರ್ಷದ ನಟ ತಾನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ
ನಟ ಸುಶಾಂತ್ ಸಿಂಗ್
ನಟ ಸುಶಾಂತ್ ಸಿಂಗ್
Updated on: 

ಮುಂಬೈ: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಬಾಂದ್ರಾದಲ್ಲಿನ ತಮ್ಮ ನಿವಾಸದಲ್ಲಿಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 34 ವರ್ಷದ ನಟ ತಾನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಿಯಾನ್ ಆತ್ಮಹತ್ಯೆಗೆ ಮರುಕ ವ್ಯಕ್ತಪಡಿಸಿ ಸುಶಾಂತ್ ಸಿಂಗ್ ಟ್ವಿಟ್ ಮಾಡಿದ್ದರು.

1981 ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್ , ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. '' ಕಾಯ್ ಪೋ ಚೇ' ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್, 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದರು.

ಸುಶಾಂತ್ ಸಿಂಗ್ ಅವರು ನಟಿಸಿದ್ದ 'ಶುದ್ಧ್ ದೇಶಿ ರೊಮ್ಯಾನ್ಸ್'  ಸಿನಿಮಾದ ನಟನೆ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೀವನಾಧಾರಿತ ಚಿತ್ರ ಸುಶಾಂತ್ ಸಿಂಗ್ ಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತ್ತು.

ಸುಶಾಂತ್ ಸಿಂಗ್ ನಿವಾಸಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಲಾಕ್ ಡೌನ್ ವೇಳೆ ಸುಶಾಂತ್ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. 

ಸುಶಾಂತ್ ಸಿಂಗ್ ನಿಧನಕ್ಕೆ ನಟ ಅಕ್ಷಯ್ ಕುಮಾರ್, ರಿತೇಶ್ ದೇಶ್ ಮುಖ್ , ಅನುರಾಗ್ ಕಶ್ಯಪ್ , ನಟಿ ಉರ್ಮಿಳಾ ಸೇರಿದಂತೆ ಹಲವು ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com