ಕೇರಳ ಪ್ರವಾಹ ಸಂದರ್ಭದಲ್ಲಿ 1 ಕೋಟಿ ನೆರವು ನೀಡಿದ್ದ ಸುಶಾಂತ್ ಸಿಂಗ್ ರಜಪೂತ್

ನಿನ್ನೆ ಮೃತಪಟ್ಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ 2018ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಪರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಧನ ಸಹಾಯ ಮಾಡಿದ್ದರು. ನಂತರ 'ಮೈ ಕೇರಳ' ಹ್ಯಾಷ್ ಟಾಗ್ ನಲ್ಲಿ ಅಭಿಮಾನಿಗಳೊಂದಿಗೆ ಈ ವಿಷಯವನ್ನು ಹಂಚಿಕೊಂಡಿದ್ದರು.
ಸುಶಾಂತ್ ಸಿಂಗ್
ಸುಶಾಂತ್ ಸಿಂಗ್
Updated on

ತಿರುವನಂತಪುರಂ: ನಿನ್ನೆ ಮೃತಪಟ್ಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ 2018ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಪರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಧನ ಸಹಾಯ ಮಾಡಿದ್ದರು. ನಂತರ 'ಮೈ ಕೇರಳ' ಹ್ಯಾಷ್ ಟಾಗ್ ನಲ್ಲಿ ಅಭಿಮಾನಿಗಳೊಂದಿಗೆ ಈ ವಿಷಯವನ್ನು ಹಂಚಿಕೊಂಡಿದ್ದರು.

ಶುಭಂ ರಂಜನ್ ಎಂಬವರು ಪ್ರವಾಹದ ಸಂದರ್ಭದಲ್ಲಿ ಸ್ವಲ್ಪ ನೆರವು ನೀಡಬೇಕಾಗಿದೆ ಆದರೆ, ನನ್ನ ಬಳಿ ಹಣ ಇಲ್ಲ ಹೇಗೆ ನೆರವು ನೀಡೋದು ಹೇಳಿ ಎಂದು ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ನಿಮ್ಮ ಪರವಾಗಿ ನಾನು ನೆರವು ನೀಡುತ್ತೇನೆ ಎಂದು ಹೇಳಿದ್ದರು. ಅದೇ ರೀತಿಯಲ್ಲಿ  ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೆರವನ್ನು ನೀಡಿದ್ದರು.

ಪ್ರವಾಹದ ಸಂದರ್ಭದಲ್ಲಿ ಸುಶಾಂತ್ ಸಿಂಗ್ ನೀಡಿದ್ದ ನೆರವು ಹಾಗೂ ಬೆಂಬಲವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೆನೆಪಿಸಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಅವರ ನಿಧನಕ್ಕೆ ಟ್ವೀಟ್ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪಿಣರಾಯ್ ವಿಜಯನ್, ಸುಶಾಂತ್ ಸಿಂಗ್  ನಿಧನದಿಂದ ಬಾಲಿವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ವರ್ಗಕ್ಕೆ ಸಂತಾಪ ಸೂಚಿಸುತ್ತೇನೆ. ಪ್ರವಾಹದ ಸಂದರ್ಭದಲ್ಲಿ ಅವರು ಮಾಡಿರುವ ಸಹಾಯ ನೆನಪಾಗುತ್ತಿದೆ ಎಂದಿದ್ದಾರೆ.

ಮುಂಬೈಯ ಬಾಂದ್ರಾದಲ್ಲಿನ ನಿವಾಸದಲ್ಲಿ ಸುಶಾಂತ್ ಸಿಂಗ್ ರಜಪೂತ್ ಭಾನುವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com