ಸುಶಾಂತ್ ಸಿಂಗ್
ಸುಶಾಂತ್ ಸಿಂಗ್

ಸುಶಾಂತ್‌ ಆತ್ಮಹತ್ಯೆ ಪ್ರಕರಣ; ಹತ್ಯೆ ಪುರಾವೆ ದೊರೆತಿಲ್ಲ, ಆತ್ಮಹತ್ಯೆಯ ತನಿಖೆ ನಡೆಸಲಿರುವ ಸಿಬಿಐ!

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಅವರ ಸಾವಿನ ಪ್ರಕರಣದಲ್ಲಿ ಯಾವುದೇ ಹತ್ಯೆಗೆ ಸಂಬಂಧಿಸಿದ ಯಾವುದೇ ಸಾಕ್ಷಿಗಳು ದೊರೆತಿಲ್ಲ. ಆದರೆ, ಅವರ ಆತ್ಮಹತ್ಯೆ ಕೂಡ ಸಹಜ ಕಾರಣಗಳಿಂದ ನಡೆದಿದೆ ಎಂಬುದರ ಕುರಿತು ಇನ್ನೂ ಸಾಬೀತಾಗಿಲ್ಲ. 
Published on

ಪುಣೆ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಅವರ ಸಾವಿನ ಪ್ರಕರಣದಲ್ಲಿ ಯಾವುದೇ ಹತ್ಯೆಗೆ ಸಂಬಂಧಿಸಿದ ಯಾವುದೇ ಸಾಕ್ಷಿಗಳು ದೊರೆತಿಲ್ಲ. ಆದರೆ, ಅವರ ಆತ್ಮಹತ್ಯೆ ಕೂಡ ಸಹಜ ಕಾರಣಗಳಿಂದ ನಡೆದಿದೆ ಎಂಬುದರ ಕುರಿತು ಇನ್ನೂ ಸಾಬೀತಾಗಿಲ್ಲ. 

ಜೂ.14ರಂದು ಸುಶಾಂತ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಅದು ಹತ್ಯೆ ಎಂಬುದಕ್ಕೆ ಇಲ್ಲಿಯವರೆಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಮೂರು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೆ, ಈಗ ತಂಡ ಪ್ರಕರಣವನ್ನು ಆತ್ಮಹತ್ಯೆಯ ಪ್ರಕರಣದಿಂದ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಆದರೆ, ಹತ್ಯೆಯ ಅನುಮಾನದ ತನಿಖೆ ಪೂರ್ಣಗೊಂಡಿಲ್ಲ ಎಂದು ಸಿಬಿಐ ತಿಳಿಸಿದೆ.

ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಬಾಂದ್ರಾದಲ್ಲಿನ ತಮ್ಮ ನಿವಾಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 

1981 ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್ , ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. '' ಕಾಯ್ ಪೋ ಚೇ' ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್, 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com