ಪಾಯಲ್ ಘೋಷ್ ಲೈಂಗಿಕ ದೌರ್ಜನ್ಯದ ಆರೋಪ: ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ಐಆರ್

ನಟಿ ಪಾಯಲ್ ಘೋಷ್ ದೂರಿನ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ
ನಟಿ ಮತ್ತು ವಕೀಲ ನಿತಿನ್ ಸತ್ಪೂಟ್ ಅವರೊಂದಿಗೆ ಪೊಲೀಸರನ್ನು ಸಂಪರ್ಕಿಸಿದ ನಂತರ ಮಂಗಳವಾರ ತಡರಾತ್ರಿ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಲಿವುಡ್ ನಟಿ ಪಾಯಲ್ ಘೋಷ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈನ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅನುರಾಗ್ ಕಶ್ಯಪ್ ಅತ್ಯಾಚಾರವೆಸಗಿರುವುದಾಗಿ ಪಾಯಲ್ ದೂರಿನಲ್ಲಿ ಆರೋಪಿಸಿದ್ದಾರೆ.
ಅನುರಾಗ್ ವಿರುದ್ಧ ಐಪಿಸಿ ಸೆಕ್ಷನ್ 376, 354, 341, 342ರ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಪಾಯಲ್ ಪರ ವಕೀಲ ನಿತಿನ್ ಸತ್ಪೂಟ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸೆಪ್ಟೆಂಬರ್ 20 ರಂದು ಅನುರಾಗ್ ಕಶ್ಯಪ್ ಅವರ ವಕೀಲರು ಹೇಳಿಕೆ ನೀಡಿದ್ದು, "ನನ್ನ ಕಕ್ಷಿದಾರರು ಇತ್ತೀಚೆಗೆ ಅವರ ವಿರುದ್ಧ ಎದ್ದಿರುವ ಲೈಂಗಿಕ ಕಿರುಕುಳದ ಸುಳ್ಳು ಆರೋಪಗಳಿಂದ ತೀವ್ರ ನೋವುಂಡಿದ್ದಾರೆ. ಈ ಆರೋಪಗಳು ಸಂಪೂರ್ಣವಾಗಿ ಸುಳ್ಳು, ದುರುದ್ದೇಶಪೂರಿತ ಮತ್ತು ಅಪ್ರಾಮಾಣಿವಾಗಿದೆ. " ಎಂದಿದ್ದಾರೆ.
ಇದಕ್ಕೆ ಮುನ್ನ ಅನುರಾಗ್ ಕಶ್ಯಪ್, ಸೆಪ್ಟೆಂಬರ್ 19 ರಂದು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


