ತಾಯಿ ಸಾವಿನ ಬೆನ್ನಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ಗೆ ಅನಾರೋಗ್ಯ, ಐಸಿಯುನಲ್ಲಿ ಚಿಕಿತ್ಸೆ!

ತಮ್ಮ ತಾಯಿಯ ಸಾವಿನ ಬೆನ್ನಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇರ್ಫಾನ್ ಖಾನ್
ಇರ್ಫಾನ್ ಖಾನ್

ಮುಂಬೈ: ತಮ್ಮ ತಾಯಿಯ ಸಾವಿನ ಬೆನ್ನಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲಗಳ ಪ್ರಕಾರ ಇದೀಗ ತಾಯಿಯನ್ನು ಕಳೆದುಕೊಂಡ ಬೆನ್ನಲ್ಲೇ ನಟ ಇರ್ಫಾನ್ ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 54 ವರ್ಷದ ಇರ್ಫಾನ್ ಖಾನ್ ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ಇದೀಗ ನಟ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ಫಾನ್ ಖಾನ್ ಆರೋಗ್ಯ ಗಂಭೀರವಾದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಟನನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚೆಗೆ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಇರ್ಫಾನ್​ ತಾಯಿಗೆ 95 ವರ್ಷ ವಯಸ್ಸಾಗಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಕಳೆದ ಶನಿವಾರದಂದು , ರಾಜಸ್ಥಾನದ ಜೈಪುರದಲ್ಲಿರುವ ಸ್ವಗೃಹದಲ್ಲಿ ಸಾವನ್ನಪ್ಪಿದ್ದರು.

ತಾಯಿಯನ್ನು ಕಳೆದುಕೊಂಡ ದಿನ ನಟ ಇರ್ಫಾನ್ ಖಾನ್ ಮುಂಬೈಯಲ್ಲಿ ಉಳಿದಿದ್ದರು. ಕೊರೋನಾ ಲಾಕ್​​ಡೌನ್​​ನಿಂದಾಗಿ ಜೈಪುರಕ್ಕೆ ತೆರಳಲಾಗದೆ ವಿಡಿಯೋ ಕರೆಯ ಮೂಲಕ ತಾಯಿಯ ಅಂತ್ಯ ಸಂಸ್ಕಾರವನ್ನು ವೀಕ್ಷಿಸಿದ್ದರು. ಇನ್ನು ನಟ ಇರ್ಫಾನ್ ಖಾನ್ ಪತ್ನಿ ಸುತಪ ಸಿಖ್ದಾರ್  ಮತ್ತು ಇಬ್ಬರು ಮಕ್ಕಳ ಜೊತೆ ಮುಂಬೈಯಲ್ಲಿ ನೆಲೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com