ಬಾಲಿವುಡ್ ನಟಿ ಕಂಗನಾ ರಣಾವತ್ ಮನೆಯ ಬಳಿ ಗುಂಡಿನ ಸದ್ದು!

ಬಾಲಿವುಡ್ ನಟಿ ಕಂಗನಾ ರಣಾವತ್ ಮನೆ ಬಳಿ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

Published: 01st August 2020 05:38 PM  |   Last Updated: 01st August 2020 05:55 PM   |  A+A-


Kangana Ranaut

ಕಂಗನಾ ರಣಾವತ್

Posted By : Vishwanath S
Source : Online Desk

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಮನೆ ಬಳಿ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. 

ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ಕಂಗನಾ ಮನೆಯ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಗುಂಡಿನ ಶಬ್ದ ಕೇಳಿಸಿತು ಎಂದು ಕಂಗನಾ ಆರೋಪಿಸಿದ್ದಾರೆ. 

ನನ್ನನ್ನು ಬೆದರಿಸಲು ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದು ಎಂದು ಕಂಗನಾ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪುರಾವೆ ಸಿಕ್ಕಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಯ ಸುತ್ತ ಭದ್ರತೆ ಕಲ್ಪಿಸಲಾಗಿದೆ.

ಕಂಗನಾ ರಣಾವತ್ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಹಲವು ಹೇಳಿಕೆಗಳನ್ನು ನೀಡಿದ್ದು ವಿವಾದ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆದರಿಸಲು ದುಷ್ಕರ್ಮಿಗಳು ಈ ಕೃತ್ಯ ನಡೆಸರಬಹುದು ಎಂದು ಹೇಳಲಾಗುತ್ತಿದೆ. 

Stay up to date on all the latest ಬಾಲಿವುಡ್ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp