ಬಾಲಿವುಡ್ ಡ್ರಗ್ಸ್ ಪ್ರಕರಣ: ನಿರ್ಮಾಪಕ ಕರಣ್ ಜೋಹರ್​​​ಗೆ ಎನ್​ಸಿಬಿ ಸಮನ್ಸ್

ಬಾಲಿವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ಜಾರಿಗೊಳಿಸಿದೆ.

Published: 17th December 2020 08:44 PM  |   Last Updated: 17th December 2020 08:44 PM   |  A+A-


ಕರಣ್ ಜೋಹರ್

Posted By : Raghavendra Adiga
Source : IANS

ಬಾಲಿವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ಜಾರಿಗೊಳಿಸಿದೆ.

ಹಿಂದಿ ಚಲನಚಿತ್ರೋದ್ಯಮದಲ್ಲಿ ಮಾದಕವಸ್ತು ಜಾಲದ ಬಗ್ಗೆ ಎನ್‌ಸಿಬಿ ತನಿಖೆ ನಡೆಸುತ್ತಿದ್ದು ಈ ಸಂಬಂಧ ಒರಮುಖ್ಯ ಮಾಹಿತಿ ಕಲೆ ಹಾಕಲು ನಿರ್ಮಾಪಕ ಕರಣ್ ಜೋಹರ್‌ಗೆ ಸಮನ್ಸ್ ನೀಡಿದೆ. ಆದರೆ ಅವರಿ​​​ಗೆ ವಿಚಾರಣೆಗೆ ಹಾಜರಾಗಲು ದಿನಾಂಕವನ್ನ ಇನ್ನೂ ತಿಳಿಸಿಲ್ಲ

ಈ ಕ್ರಮ ಕಳೆದ ಎರಡು ತಿಂಗಳುಗಳಿಂದ ಎನ್‌ಸಿಬಿ ತೆರೆದಿಡಲು ಪ್ರಯತ್ನಿಸುತ್ತಿರುವ ಬಾಲಿವುಡ್-ಡ್ರಗ್ಸ್ ಮಾಫಿಯಾ ಲಿಂಕ್ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿದೆ. ಈ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ದುರಂತ ಸಾವಿನ ನಂತರ ಬಾಲಿವುಡ್ ನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಏತನ್ಮಧ್ಯೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ನಟ ಅರ್ಜುನ್ ರಾಂಪಾಲ್ ಅವರನ್ನು ವಿಚಾರಣೆಗೆ ಆಹ್ವಾನಿಸಿತ್ತು. ಆದರೆ ನಟ ತಮಗೆ ಒಂದು ವಾರದ ಸಮಯವನ್ನು ನೀಡುವಂತೆ ಕೋರಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ವೈಯುಕ್ತಿಕ ಕಾರಣದಿಂದಾಗಿ ವಾರದ ಕಾಲ ಸಮಯ ಕೇಳಿದ್ದಾರೆ ಎನ್ನಲಾಗಿದೆ. 

Stay up to date on all the latest ಬಾಲಿವುಡ್ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp