ರೇಖಾ
ಬಾಲಿವುಡ್
ಭದ್ರತಾ ಸಿಬ್ಬಂದಿಗೆ ಕೊರೋನಾ: ಬಾಲಿವುಡ್ ನಟಿ ರೇಖಾ ಮನೆ ಸೀಲ್'ಡೌನ್
ಭದ್ರತಾ ಸಿಬ್ಬಂದಿಗೆ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ರೇಖಾ ಅವರ ಮನೆಯನ್ನು ಸೀಲ್'ಡೌನ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಮುಂಬೈ: ಭದ್ರತಾ ಸಿಬ್ಬಂದಿಗೆ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ರೇಖಾ ಅವರ ಮನೆಯನ್ನು ಸೀಲ್'ಡೌನ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಬಾಲಿವುಡ್ ನಟ ಅಮೀರ್ ಖಾನ್, ನಿರ್ದೇಶಕ ಕರಣ್ ಜೋಹನ್ ಅವರ ಭದ್ರತಾ ಸಿಬ್ಬಂದಿಗಳಲ್ಲಿ ಈ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದೀಗ ನಟಿ ರೇಖಾ ಅವರ ಭದ್ರತಾ ಸಿಬ್ಬಂದಿಯಲ್ಲೂ ಕೊರೋನಾ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ರೇಖಾ ಅವರು ಇರುವ ಬಂಗಲೆಯನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್'ಡೌನ್ ಮಾಡಿದೆ ಎಂದು ತಿಳಿದುಬಂದಿದೆ. ಇನ್ನು ರೇಖಾ ಅವರೂ ಕೂಡ ಸ್ವಯಂ ಕ್ವಾರಂಟೈನ್'ಗೆ ಒಳಗಾಗಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ