ಬಾಲಿವುಡ್ ನಟ ಅನುಪಮ್ ಖೇರ್ ತಾಯಿ, ಕುಟುಂಬ ಸದಸ್ಯರಿಗೆ ಕೊರೋನಾ!

ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲಾರಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಅನುಪಮ್ ಖೇರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯ ನಟನ ತಾಯಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನುಪಮ್ ಖೇರ್

ಇದಲ್ಲದೆ  ಖೇರ್ ಅವರ ಸಹೋದರ, ರಾಜು ಖೇರ್, ಅವರ ಅತ್ತಿಗೆ ಮತ್ತು ಸೋದರ ಸೊಸೆ ಸಹ ಕೊರೋನಾ ಸೋಂಕಿಗೆ ತುತ್ತಾಗಿದ್ದು ನಟ ಖೇರ್ ಅವರಿಗೆ ಮಾತ್ರ ಕೊರೋನಾ ನೆಗೆಟಿವ್ ವರದಿ ಬಂದಿದೆ.

"ನನ್ನ ತಾಯಿ ದುಲಾರಿ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ನಾವು ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ನನ್ನ ಸಹೋದರ, ಭಭಿ ಮತ್ತು ಸೋದರ ಸೊಸೆ ಸಹ ಕೋವಿಡ್ ಗೆ ಪಾಸಿಟಿವಿ ವರದಿ ಪಡೆದಿದ್ದಾರೆ. ನಾನೂ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ನನಗೆ ಸೋಂಕು ತಗುಲಿಲ್ಲ. " ಖೇರ್ ಟ್ವೀಟ್ ನಲ್ಲಿ ಹೇಳಿದ್ದಾರೆ.

ಏತನ್ಮಧ್ಯೆ, ಶನಿವಾರ, ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಕೊರೊಣಾವೈರಸ್ ತಗುಲಿರುವ ವರದಿಯಾಗಿದೆ. ತಂದೆ ಮತ್ತು ಮಗಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೊಂದುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com