ಲಾಕ್ ಡೌನ್ ನಿಯಮ ಮುರಿದ ಹಿನ್ನಲೆ: ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಪೂನಂ ಪಾಂಡೆ
ಪೂನಂ ಪಾಂಡೆ

ಮುಂಬೈ: ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನ ಮರೀನ್ ಡ್ರೈವ್ ನಲ್ಲಿ ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಲಾಕ್ ಡೌನ್ ನಿಯಮ ಮುರಿದು ಕಾರಿನಲ್ಲಿ ಸುತ್ತಾಡುತ್ತಿದ್ದ ಹಿನ್ನಲೆಯಲ್ಲಿ ಮುಂಬೈ ಪೊಲೀಸರು ಲಾಕ್ ಡೌನ್ ನಿಯಮದಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಸ್ಯಾಮ್ ಅಹ್ಮದ್ ವಿರುದ್ಧ ಸೆಕ್ಷಣನ್ 269 (ಜೀವಕ್ಕೆ ಅಪಾಯ ತರುವ ರೋಗದ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 188 (ಅಸಹಕಾರ) ಭಾರತೀಯ ದಂಡ ಸಂಹಿತೆಯ (ಐಪಿಸಿ) ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯ ನಿಬಂಧನೆಗಳ  ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮೃತ್ಯುಂಜಯ್ ಹಿರೇಮಠ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com