ಕೆಬಿಸಿ-12: ಆನ್ ಲೈನ್ ಮೂಲಕ ಒಂದೇ ದಿನ 2.5 ಮಿಲಿಯನ್ ಜನರಿಂದ ನೋಂದಣಿ

ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್ ಪತಿ'(ಕೆಬಿಸಿ)ಗೆ ಬುಧವಾರ ಆನ್ ಲೈನ್ ನೋಂದಣಿ ಆರಂಭಗೊಂಡಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 2.5 ಮಿಲಿಯನ್ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. 
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್

ಹೈದರಾಬಾದ್: ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್ ಪತಿ'(ಕೆಬಿಸಿ)ಗೆ ಬುಧವಾರ ಆನ್ ಲೈನ್ ನೋಂದಣಿ ಆರಂಭಗೊಂಡಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 2.5 ಮಿಲಿಯನ್ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. 

ಸೋನಿ ಎಲ್ ಐವಿ ವಾಹಿನಿಯ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.360ರಷ್ಟು ಭಾಗವಹಿಸುವವರ ಸಂಖ್ಯೆ ಹೆಚ್ಚಾಗಿದೆ. 

ಜನರು ಡಿಜಿಟಲ್ ಮಾಧ್ಯಮಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಕೆಬಿಸಿ 12ರ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಡಿಜಿಟಲ್ ಮೂಲಕ ನಡೆಸಲು ಯೋಜಿಸಲಾಗಿತ್ತು. ಇದರಲ್ಲಿ ಜ್ಞಾನದ ಪರೀಕ್ಷೆ ಜೊತೆಗೆ ವಿಡಿಯೋ ಸಲ್ಲಿಕೆಯನ್ನು ಕೂಡ ಆಯ್ಕೆ ಪ್ರಕ್ರಿಯೆಯ ಭಾಗವಾಗಿಸಲಾಗಿತ್ತು. ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಕಳೆದ ಎರಡು ದಶಕಗಳಲ್ಲಿ, ಕೆಬಿಸಿ ಜ್ಞಾನದ ಮೌಲ್ಯಗಳನ್ನು ಮರು ವ್ಯಾಖ್ಯಾನಿಸಿದೆ. ನೋಂದಣಿ ಮೇ 22ರವರೆಗೆ ತೆರೆದಿರಲಿದೆ. ಬಳಕೆದಾರರು ಬಚ್ಚನ್ ಅವರು ಪ್ರತಿನಿತ್ಯ ರಾತ್ರಿ 9 ಗಂಟೆಗೆ ಸೋನಿ ಟಿವಿಯಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಭಾಗವಹಿಸಬಹುದು. ಉತ್ತರವನ್ನು ಸೋನಿ ಲೈವ್ ಆ್ಯಪ್ ಅಥವಾ ಎಸ್ ಎಂಎಸ್ ಕಳುಹಿಸುವ ಮೂಲಕ ಪಾಲ್ಗೊಳ್ಳಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com