ಎಫ್‍ಐಆರ್ ರದ್ದತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಕಂಗನಾ, ರಂಗೋಲಿ
ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Published: 23rd November 2020 07:35 PM | Last Updated: 23rd November 2020 07:35 PM | A+A A-

ರಂಗೋಲಿ-ಕಂಗನಾ ರಣಾವತ್
ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕೋಮು ಉದ್ವೇಗವನ್ನು ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸೋಮವಾರ ಹಾಗೂ ಮಂಗಳವಾರ ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಅಕ್ಟೋಬರ್ 26, 27 ಮತ್ತು ನವೆಂಬರ್ 9 ಹಾಗೂ 10 ರಂದು ಸಹೋದರಿಯರನ್ನು ಎರಡು ಬಾರಿ ಹಾಜರಾಗಲು ಸೂಚಿಸಲಾಗಿತ್ತಾದರೂ, ಅವರು ಪೊಲೀಸರ ಮುಂದೆ ಹಾಜರಾಗಿರಲಿಲ್ಲ.
ನವೆಂಬರ್ 15 ರವರೆಗೆ ಹಿಮಾಚಲ ಪ್ರದೇಶದಲ್ಲಿ ತಮ್ಮ ಸಹೋದರನ ವಿವಾಹದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಅವರು ತಮ್ಮ ವಕೀಲರ ಮೂಲಕ ತಿಳಿಸಿದ್ದರು.
ಸೋದರಿಯರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯವು ಬಾಂದ್ರಾ ಪೊಲೀಸರಿಗೆ ನಿರ್ದೇಶನ ನೀಡಿತ್ತು, ನಂತರ ಪೊಲೀಸರು ಕಂಗನಾ ಹಾಗೂ ರಂಗೋಲಿಗೆ ಸೂಚನೆ ನೀಡಿದ್ದರು.