ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಸೋದರನ ಬಂಧನ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

Published: 19th October 2020 05:06 PM  |   Last Updated: 19th October 2020 05:06 PM   |  A+A-


Sushanth-Arjun-Gabriella

ಸುಶಾಂತ್-ಅರ್ಜುನ್-ಗ್ರೇಬಿಯಲ್ಲಾ

Posted By : Vishwanath S
Source : UNI

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

ನಟ ಅರ್ಜುನ್ ರಾಂಪಲ್ ಮತ್ತು ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸದ್ಯ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಎನ್ ಸಿ ಬಿ ಈಗಾಗಲೇ ಸಾಕಷ್ಟು ಮಂದಿಯನ್ನು ಬಂಧಿಸಿದ್ದು, ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ನಟಿ ದೀಪಿಕಾ ಪಡುಕೋಣೆ, ರಕುಲ್ ಪ್ರೀತ್ ಸಿಂಗ್, ಸಾರ್ ಅಲಿ ಖಾನ್, ಶ್ರದ್ಧಾ ಸೇರಿದಂತೆ ಇನ್ನೂ ಹಲವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದರು.

ಗೇಬ್ರಿಯೆಲಾ ಸಹೋದರ, ಅಗಿಸಿಲಾಸ್ ಜತೆಗೆ 30 ವರ್ಷದ ದಕ್ಷಿಣ ಆಫ್ರಿಕಾದ ಯುವಕನನ್ನು ಸಹ ಪೊಲೀಸರು ಭಾನುವಾರ ಬಂಧಿಸಿದ್ದು, ನಿಷೇಧಿತ ಗಾಂಜಾ ಮತ್ತು ಆಲ್ ಪ್ರಜೋಲಮ್ ಅನ್ನು ವಶಕ್ಕೆ ಪಡೆಯಲಾಗಿದೆ.

ಅಗಿಸಿಲಾಸ್ ಬಾಲಿವುಡ್ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈತ ಅನೇಕ ಡ್ರಗ್ ಪೆಡ್ಲರ್ ಗಳ ಜೊತೆ ಸಂಪರ್ಕದಲ್ಲಿರುವ ಬಗ್ಗೆ ವಿಚಾರಣೆ ವೇಳೆ ಬಹಿರಂಗವಾಗಿದೆ. ಸದ್ಯ ಅಗಿಸಿಲಾಸ್ ನನ್ನು 3 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಬಗ್ಗೆ ಅರ್ಜುನ್ ರಾಂಪಲ್ ಅಥವಾ ಆತನ ಪ್ರೇಯಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


Stay up to date on all the latest ಬಾಲಿವುಡ್ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp