ಮುಂಬೈ: ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ.
69 ವರ್ಷದ ಪಿಂಕಿ ರೋಶನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ನಿಜ. ಯಾವುದೇ ರೋಗ ಲಕ್ಷಣಗಳಿಲ್ಲ. ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ಹೇಳಿದ್ದಾರೆ.
ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದವರು ನೀಡಿದ್ದ ಗಿಫ್ಟ್ ಗಳನ್ನು ಪಿಂಕಿ ರೋಶನ್ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.
ಮುಂಬೈನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 2,45,871ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 9,869 ಆಗಿದೆ.
Advertisement