ಮೂರನೇ ಮಗು ಹೊಂದಿದವರನ್ನು ಜೈಲಿಗಟ್ಟಬೇಕು: ನಟಿ ಕಂಗನಾ

ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು, ಮೂರನೇ ಮಗು ಹೊಂದಿದವರನ್ನು ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.
ಕಂಗನಾ ರಣಾವತ್
ಕಂಗನಾ ರಣಾವತ್
Updated on

ಮುಂಬೈ: ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು, ಮೂರನೇ ಮಗು ಹೊಂದಿದವರನ್ನು ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜನಸಂಖ್ಯೆ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಬೇಕು. ವೋಟ್ ರಾಜಕಾರಣದಿಂದ ಬೇಸತ್ತು ಹೋಗಿದ್ದೇವೆ. ಈ ಸಮಸ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಬಲವಂತವಾಗಿ ಜನರ ಸಂತಾನಶಕ್ತಿ ಹರಣಗೊಳಿಸಲು ಮುಂದಾಗಿದ್ದರು. ಆದರೆ, ಬಳಿಕ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇಂದಿನ ಬಿಕ್ಕಟ್ಟನ್ನು ಗಮನಿಸಿದಾಗ ಕನಿಷ್ಠ ಮೂರನೇ ಮಗು ಹೊಂದಿದರೆ ದಂಡ ಅಥವಾ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಂಗನಾ ರಣಾವತ್ ಅವರ ಈ ಟ್ವೀಟ್ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಗಮನಾರ್ಹ ಸಂಗತಿಯೆಂದರೆ ಸ್ವತಃ ಕಂಗನಾ ಪೋಷಕರು ಬಾಲಿವುಡ್ ನಟಿ ಸೇರಿದಂತೆ ಮೂವರು ಮಕ್ಕಳನ್ನು ಹೊಂದಿದ್ದಾರೆ. ಈ ನಿಯಮವು ಆಕೆಯ ಪೋಷಕರಿಗೂ ಅನ್ವಯವಾಗುವುದಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com