ಅಶ್ಲೀಲ ವಿಡಿಯೋ ಪ್ರಕರಣ: ರಾಜ್ ಕುಂದ್ರಾಗೆ ಜಾಮೀನು ನಿರಾಕರಿಸಿದ ಮುಂಬಯಿ ಕೋರ್ಟ್

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.
ರಾಜ್ ಕುಂದ್ರಾ
ರಾಜ್ ಕುಂದ್ರಾ
Updated on

ಮುಂಬಯಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಆರೋಪಿಗೆ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗುವುದರ ಜೊತೆಗೆ ಸಾಕ್ಷ್ಯನಾಶ ಪಡಿಸುವ ಸಾಧ್ಯತೆಯಿದೆ ಎಂದು ಹೇಳಿದೆ.

ಅಪರಾಧದ ಸ್ವರೂಪ ಮತ್ತು ಅದರ ಪ್ರಾಬಲ್ಯತೆ ಆಧಾರದ ಮೇಲೆ ಜಾಮೀನು ನಿರಾಕರಿಸಲಾಗಿದೆ, . ಆಪಾದಿತ ಅಪರಾಧದ ಪರಿಣಾಮವು ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದಿದೆ. ಈ ಅಪರಾಧವು ನಮ್ಮ ಸಮಾಜದ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಕೋರ್ಟ್ ತಿಳಿಸಿದೆ.

ಪ್ರಕರಣವೂ ವ್ಯಾಪಕವಾದ ಸಾಮಾಜಿಕ ಆಯಾಮವನ್ನು ಹೊಂದಿದ್ದು ವಿಚಾರಣೆಯಲ್ಲಿ ಸಾಮಾಜಿಕ ಆಸಕ್ತಿಯನ್ನು ಕಡೆಗಣಿಸಲಾಗುವುದಿಲ್ಲ.  ಪ್ರಕರಣವು ಸ್ತುತ ತನಿಖೆ ಪ್ರಗತಿಯಲ್ಲಿದೆ, ಇಂತಹ ಸನ್ನಿವೇಶಗಳಲ್ಲಿ, ಈ ಹಂತದಲ್ಲಿ ಆರೋಪಿಗಳ ಬಿಡುಗಡೆ ಖಂಡಿತವಾಗಿಯೂ ತನಿಖೆಗೆ ಅಡ್ಡಿಯಾಗುತ್ತದೆ. ಹಾಗಾಗಿ ವಾಸ್ತವಾಂಶಗಳು ಮತ್ತು ಸನ್ನಿವೇಶಗಳನ್ನು ಪರಿಗಣಿಸಿ,
ಎರಡೂ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ "ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳು ಸಾಕ್ಷ್ಯವನ್ನು ಅಳಿಸಿದ್ದಾರೆ ಎಂಬ ಪ್ರಾಸಿಕ್ಯೂಷನ್ ವಾದವನ್ನೂ ನ್ಯಾಯಾಲಯ ಪರಿಗಣಿಸಿದೆ. ಆರೋಪಿಯ ಜಾಮೀನು ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯ, ತನಿಖೆ ಇನ್ನೂ ಮುಂದುವರಿದಿದೆ ಮತ್ತು ಅಪರಾಧವು ಗಂಭೀರ ಸ್ವರೂಪದ್ದಾಗಿದೆ ಎಂದು ಹೇಳಿದೆ. ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಅವರು ತಲೆಮರೆಸಿಕೊಳ್ಳುತ್ತಾರೆ ಮತ್ತು ಸಾಕ್ಷ್ಯವನ್ನು ತಿರುಚುವ ಸಾಧ್ಯತೆಯಿದೆ ಎಂಬುದನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಉದ್ಯಮಿ ರಾಜ್ ಕುಂದ್ರಾ ಮತ್ತು ಆತನ ಸಹವರ್ತಿ ರಯಾನ್ ಥಾರ್ಪೆ ಅವರು ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com