ಶಸ್ತ್ರ ಚಿಕಿತ್ಸೆ ನಂತರ ಶೂಟಿಂಗ್ ಗೆ ಮರಳಿದ ನಟ ಅಭಿಷೇಕ್ ಬಚ್ಚನ್
ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇತ್ತೀಚಿಗೆ ಚಿತ್ರೀಕರಣದ ವೇಳೆ ಅಭಿಷೇಕ್ ಬಚ್ಚನ್ ಕೈಗೆ ಗಾಯವಾಗಿತ್ತು. ಕೂಡಲೇ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಇದೀಗ ಶಸ್ತ್ರಚಿಕಿತ್ಸೆ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಭಿಷೇಕ್, ‘ಚೆನ್ನೈನಲ್ಲಿ ನನ್ನ ಹೊಸ ಸಿನಿಮಾದ ಶೂಟಿಂಗ್ ವೇಳೆ ಬುಧವಾರ ಅವಘಡ ನಡೆದಿತ್ತು. ಬಲಗೈಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿತ್ತು.
ಆದ್ದರಿಂದ ಕೂಡಲೇ ಮುಂಬೈ ಹೊರಟುಬಂದು ಆಸ್ಪತ್ರೆಗೆ ದಾಖಲಾಗಿದ್ದೆ. ಸದ್ಯ ಶಸ್ತ್ರಚಿಕಿತ್ಸೆ ನಡೆದಿದ್ದು, ಎಲ್ಲವೂ ಸರಿ ಹೋಗಿದೆ. ಶೂಟಿಂಗ್ ಮುಂದುವರಿಸಲು ಈಗ ಮತ್ತೆ ಚೆನ್ನೈಗೆ ಮರಳಿದ್ದೇನೆ. ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಬಲಗೈ ಗೆ ಪೆಟ್ಟು ಬಿದ್ದಿದ್ದು ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ನಡೆದಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ