ಭುವನ ಸುಂದರಿ ಹರ್ನಾಜ್ ಕೌರ್ ಸಂಧು ಭಾರತಕ್ಕೆ ಆಗಮನ
ನವದೆಹಲಿ: ಭುವನ ಸುಂದರಿ (miss-universe) ಸ್ಪರ್ಧೆಯಲ್ಲಿ ವಿಜೇತರಾದ ಭಾರತದ ಹರ್ನಾಜ್ ಕೌರ್ ಸಂಧು ಇಂದು ಸ್ವದೇಶಕ್ಕೆ ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಇಂದು ಸಂಜೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭುವನ ಸುಂದರಿ 'ಹರ್ನಾಜ್ ಕೌರ್ ಸಂಧು'ರನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಬರುವಿಕೆಗಾಗಿಯೇ ಕಾದು ಕುಳಿತಿದ್ದ ಅಭಿಮಾನಿಗಳು, ಸ್ನೇಹಿತರು ಮತ್ತು ಬಂಧುಗಳುಹರ್ನಾಜ್ ಕೌರ್ ಸಂಧು ಪರ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.
21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ತಂದುಕೊಟ್ಟ ಸುಂದರಿ
ಇನ್ನು ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು(Harnaaz Kaur Sandhu) 70ನೇ ಮಿಸ್ ಯೂನಿವರ್ಸ್ ಪಟ್ಟ ಒಲಿಸಿಕೊಂಡಿದ್ದರು. ಇದು ಬರೊಬ್ಬರಿ 21 ವರ್ಷಗಳ ಬಳಿಕ ಭಾರತಕ್ಕೆ ಒಲಿದುಬಂದ ಪಟ್ಟವಾಗಿದೆ. ಕೊನೆಯ ಬಾರಿ 2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು. ಆ ಬಳಿಕ ಬರೋಬ್ಬರಿ 21 ವರ್ಷಗಳ ನಂತರ ಭಾರತದ ರ್ನಾಜ್ ಕೌರ್ ಸಂಧು ಈ ಕಿರೀಟವನ್ನು ಧರಿಸಿದ್ದಾರೆ.
ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ