ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ನಿಧನಹೊಂದಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ದಿಲೀಪ್ ಕುಮಾರ್
ದಿಲೀಪ್ ಕುಮಾರ್
Updated on

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ನಿಧನಹೊಂದಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್.

1944ರಲ್ಲಿ ಜ್ವರ್ ಭಾತಾ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ದಿಲೀಪ್ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com