ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ಪಾಸಿಟಿವ್!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ವಕ್ಕರಿಸಿದ್ದು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪಡುಕೋಣೆ ಕುಟುಂಬ
ಪಡುಕೋಣೆ ಕುಟುಂಬ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ವಕ್ಕರಿಸಿದ್ದು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಕೆಲ ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ವಾರ ಕಳೆದರೂ ಜ್ವರ ಕಡಿಮೆ ಆಗದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಲಾಗಿದ್ದು ಈ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರಕಾಶ್ ಪಡುಕೋಣೆ ಅವರ ಪತ್ನಿ ಉಜ್ವಲ ಹಾಗೂ ಎರಡನೇ ಪುತ್ರಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ಅವರು ಮನೆಯಲ್ಲೇ ಐಸೋಲೆಟ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com