ನಟ ಕಮಾಲ್ ಖಾನ್ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ ಸಲ್ಮಾನ್ ಖಾನ್
ಮುಂಬೈ: ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ರಾಧೆ ಚಿತ್ರದ ಕುರಿತು ವಿಮರ್ಶೆ ವಿಚಾರವಾಗಿ ನಟ ಕಮಾಲ್ ಖಾನ್ ವಿರುದ್ಧ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ನಟ ಸಲ್ಮಾನ್ ಖಾನ್ ಅಭಿನಯದ ರಾಧೆ ಚಿತ್ರದ ವಿಮರ್ಶೆ ವೇಳೆ ನಟ ಕಮಾಲ್ ಖಾನ್ ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ನಟ ಸಲ್ಮಾನ್ ಖಾನ್ ಪರ ವಕೀಲರು ಮುಂಬೈ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ತಮಗೆ ನೋಟಿಸ್ ತಲುಪಿರುವ ಕುರಿತು ನಟ ಕಮಾಲ್ ಖಾನ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು 'ಸಲ್ಮಾನ್ ಖಾನ್ ರಾಧೆ ಅವರ ವಿಮರ್ಶೆಗಾಗಿ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ನೋಟಿಸ್ ಪ್ರಕಾರ, ಸಲ್ಮಾನ್ ಖಾನ್ ಅವರ ಕಾನೂನು ತಂಡವು ಗುರುವಾರ ನಗರ ಸಿವಿಲ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದೆ ತುರ್ತು ವಿಚಾರಣೆಗೆ ಈ ವಿಷಯವನ್ನು ಪ್ರಸ್ತಾಪಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ