ಆರ್ ಎಸ್ ಎಸ್ ಕುರಿತ ಹೇಳಿಕೆ: ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಎಫ್ ಐಆರ್ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾವೇದ್ ಅಖ್ತರ್
ಜಾವೇದ್ ಅಖ್ತರ್
Updated on

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ನಗರದ ಮೂಲದ ವಕೀಲ ಸಂತೋಷ್ ದುಬೆ ನೀಡಿದ ದೂರಿನ ಆಧಾರದ ಮೇಲೆ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ಮುಲುಂಡ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಟಿವಿ ಚಾನಲ್ ವೊಂದರ ಸಂದರ್ಶನದಲ್ಲಿ ಆರ್ ಎಸ್ ಎಸ್ ವಿರುದ್ಧ ಸುಳ್ಳು, ಅವಹೇಳನಕಾರಿ ಹೇಳಿಕೆ ನೀಡಿಕೆ ಆರೋಪದ ಮೇರೆಗೆ ಜಾವೇದ್ ಅಖ್ತರ್ ಅವರಿಗೆ ಕಳೆದ ತಿಂಗಳು ವಕೀಲ ಸಂತೋಷ್ ದುಬೆ ಕಾನೂನಿನ ನೋಟಿಸ್ ವೊಂದನ್ನು ಕಳುಹಿಸಿ, ಕ್ಷಮೆ ಯಾಚಿಸುವಂತೆ ಕೋರಿದ್ದರು. ಇತ್ತೀಚಿಗೆ ನಡೆದ ಸಂದರ್ಶನದಲ್ಲಿ ತಾಲಿಬಾನ್ ನೊಂದಿಗೆ ಹಿಂದೂ ಬಲಪಂಥೀಯರನ್ನು ಜಾವೇದ್ ಅಖ್ತರ್ ಹೋಲಿಕೆ ಮಾಡಿದ್ದರು.

ಜಾವೇದ್ ಅಖ್ತರ್ ಇಂತಹ ಹೇಳಿಕೆ ನೀಡುವ ಮೂಲಕ ಐಪಿಸಿ ಸೆಕ್ಷನ್ 499 (ಮಾನಹಾನಿ) 500 ( ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿರುವುದಾಗಿ ದುಬೆ ನೋಟಿಸ್ ನಲ್ಲಿ ಹೇಳಿದ್ದರು. ಹೇಳಿಕೆ ಕುರಿತಂತೆ ಕ್ಷಮೆಯಾಚಿಸುವಂತೆ ಈ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ, ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ನನ್ನ ದೂರಿನ ಆಧಾರದ ಮೇಲೆ ಇದೀಗ ಎಫ್ ಐಆರ್ ದಾಖಲಿಸಲಾಗಿದೆ ಎಂದು ವಕೀಲರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com