ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ಕುಂದ್ರಾ ಆತನ ಸಹವರ್ತಿ ರಯಾನ್ ಥಾರ್ಪೆ ವಿರುದ್ಧ ಸುಮಾರು 1,500 ಪುಟಗಳ ಚಾರ್ಜ್ ಶೀಟ್ ಅನ್ನು ಅಪರಾಧ ವಿಭಾಗದವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ರಾಜ್ ಕುಂದ್ರಾ ಮುಖ್ಯ ಸಂಚಾಲಕನಾಗಿದ್ದು ಲಕ್ಷಾಂತರ ರುಪಾಯಿ ಸಂಪಾದಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾರನ್ನು ಜುಲೈನಲ್ಲಿ ಬಂಧಿಸಲಾಯಿತು. ಸಿಂಗಪುರದ ನಿವಾಸಿಯಾದ ಯಶ್ ಠಾಕೂರ್ ಮತ್ತು ಲಂಡನ್ ಮೂಲದ ಪ್ರದೀಪ್ ಬಕ್ಷಿ ಅವರನ್ನು ಇನ್ನಿಬ್ಬರು ಆರೋಪಿಗಳೆಂದು ಆರೋಪ ಪಟ್ಟಿಯಲ್ಲಿ ತೋರಿಸಲಾಗಿದೆ.
ಈ ವರ್ಷದ ಏಪ್ರಿಲ್‌ನಲ್ಲಿ ಅಪರಾಧ ವಿಭಾಗವು ಒಂಬತ್ತು ಜನರ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು.
Advertisement