
ವಿಕ್ಕಿ ಕೌಶಲ್
ಮುಂಬೈ: ನಟ ವಿಕ್ಕಿ ಕೌಶಲ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸದ್ಯ ಅವರು ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ.
ಕೊರೋನಾ ಸೋಂಕಿಗೆ ಒಳಗಾಗಿರುವ ವಿಕ್ಕಿ ಕೌಶಲ್ ತಮಗೆ ಕೋವಿಡ್ ಸೋಂಕು ತಗುಲಿರುವ ಸಂಬಂಧ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಎಲ್ಲ ರೀತಿಯ ಜಾಗರೂಕತೆ ಮತ್ತು ಮುನ್ನೆಚ್ಚರಿಕೆ ವಹಿಸಿದ ಹೊರತಾಗಿಯೂ ದುರದೃಷ್ಟವಶಾತ್ ನನಗೆ ಕೋವಿಡ್ ಸೋಂಕು ತಗುಲಿದೆ. ಮಾರ್ಗಸೂಚಿ ಅನುಸಾರ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಜಾಗರೂಕರಾಗಿರಿ ಮತ್ತು ಸುರಕ್ಷಿತರಾಗಿರಿ’ ಎಂದು ಅವರು ಉಲ್ಲೇಖಿಸಿದ್ದಾರೆ.
ಭೂಮಿ ಪೆಡ್ನೆಕರ್ ಮತ್ತು ವಿಕ್ಕಿ ಕೌಶಲ್ಇ ಬ್ಬರು ಶಶಾಂಕ್ ಕೈತಾನ್ ನಿರ್ದೇಶನದ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಿದ್ದರು, ಭೂಮಿ ಪೆಡ್ನೆಕರ್ ಅವರಿಗೆ ಸೋಮವಾರ ಸೋಂಕು ಪತ್ತೆಯಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು. ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.