ಸೂರ್ಯವಂಶಿ' ರಿಲೀಸ್ ಮತ್ತೆ ಮುಂದಕ್ಕೆ!
ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ 'ಸೂರ್ಯವಂಶಿ'' ಚಿತ್ರ ಏಪ್ರಿಲ್ 30ಕ್ಕೆ ರಿಲೀಸ್ ಆಗುತ್ತಿಲ್ಲ, ಮತ್ತೆ ಮುಂದಕ್ಕೆ ಹೋಗಿದೆ. ಚಿತ್ರ ನಿರ್ಮಾಪಕರು ಸೋಮವಾರ ಈ ವಿಷಯವನ್ನು ತಿಳಿಸಿದ್ದಾರೆ.
Published: 05th April 2021 08:50 PM | Last Updated: 05th April 2021 08:52 PM | A+A A-

ಅಕ್ಷಯ್ ಕುಮಾರ್
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ 'ಸೂರ್ಯವಂಶಿ'' ಚಿತ್ರ ಏಪ್ರಿಲ್ 30ಕ್ಕೆ ರಿಲೀಸ್ ಆಗುತ್ತಿಲ್ಲ, ಮತ್ತೆ ಮುಂದಕ್ಕೆ ಹೋಗಿದೆ. ಚಿತ್ರ ನಿರ್ಮಾಪಕರು ಸೋಮವಾರ ಈ ವಿಷಯವನ್ನು ತಿಳಿಸಿದ್ದಾರೆ.
ರೋಹಿತ್ ಶೆಟ್ಟಿ ನಿರ್ದೇಶನದ ಪೊಲೀಸ್ ಕಥೆಯಾಧಾರಿತ ಚಿತ್ರ ಕಳೆದ ವರ್ಷ ಮಾರ್ಚ್ 24ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ರೋಹಿತ್ ಶೆಟ್ಟಿ ಅವರೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಯನ್ನು ಮುಂದೂಡಲು ನಿರ್ಧರಿಸಲಾಯಿತು. ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಸೂರ್ಯವಂಶಿ ಚಿತ್ರ ಬಿಡುಗಡೆಯನ್ನು ಮುಂದೂಡುವ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ರೋಹಿತ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ ಎಂದು ಚಿತ್ರ ತಂಡ ಹೇಳಿಕೆಯಲ್ಲಿ ತಿಳಿಸಿದೆ.
ಕೋವಿಡ್ -19 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ7 ಗಂಟೆಯವರೆಗೂ ವಾರಾಂತ್ಯದ ಲಾಕ್ ಡೌನ್ ಹಾಗೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ನಟ ಅಕ್ಷಯ್ ಕುಮಾರ್ ಅವರಿಗೂ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.