ವಂಚನೆ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟೀಸ್
ವೆಲ್‌ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.
Published: 13th August 2021 08:22 AM | Last Updated: 13th August 2021 08:22 AM | A+A A-

ಶಿಲ್ಪಾ ಶೆಟ್ಟಿ
ವೆಲ್‌ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಫ್ರಾಂಚೈಸಿ ಡೀಲ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಐಒಎಸ್ ಐಎಸ್ ವೆಲ್‌ನೆಸ್ ಸೆಂಟರ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಡೈರೆಕ್ಟರ್ ವಿರುದ್ಧ ಲಕ್ನೋನಲ್ಲಿ ದೂರು ದಾಖಲಾಗಿದೆ. ಕಂಪನಿಗೆ ಶಿಲ್ಪಾ ಶೆಟ್ಟಿ ಅಧ್ಯಕ್ಷೆ ಎಂದು ತಿಳಿದುಬಂದಿದೆ. ಹೀಗಾಗಿ, ಶಿಲ್ಪಾ ಶೆಟ್ಟಿಗೆ ನಾವು ನೋಟೀಸ್ ಕೊಟ್ಟಿದ್ದೇವೆ. ಪ್ರಕರಣ ಸಂಬಂಧ ಅವರ ವಿವರಣೆಯನ್ನು ತಿಳಿಸಲು ಸೂಚಿಸಿದ್ದೇವೆ' ಎಂದು ಲಕ್ನೋ ಪೊಲೀಸ್ ಆಯುಕ್ತ ಡಿಕೆ ಠಾಕೂರ್ ಹೇಳಿದ್ದಾರೆ.
ಶಿಲ್ಪಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ, ಸೋಷಿಯಲ್ ಮೀಡಿಯಾದಲ್ಲಿ ಕಿರಣ್ ಬಾವಾ ಪೋಸ್ಟ್ ಹಾಕಿದ್ದಾರೆ. ವೆಲ್‌ನೆಸ್ ಸೆಂಟರ್‌ಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಕಿರಣ್ ಬಾವಾ ತಿಳಿಸಿದ್ದಾರೆ.
ಐಒಎಸ್ ಐಎಸ್ ಸ್ಪಾ ಮತ್ತು ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್‌ನ ಚೇರ್ ಪರ್ಸನ್ ಆಗಿ, ಜವಾಬ್ದಾರಿಯುತ ವ್ಯಕ್ತಿಯಾಗಿ ನಾನು ಈ ಪೋಸ್ಟ್ ಮಾಡುತ್ತಿದ್ದೇನೆ. ಐಒಎಸ್ ಐಎಸ್ ಗೂ ಶಿಲ್ಪಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿಗೂ ಯಾವುದೇ ಸಂಬಂಧ ಇಲ್ಲ. ಐಒಎಸ್ ಐಎಸ್ ನಿಂದ ಅವರು ಬಹಳ ಹಿಂದೆಯೇ ದೂರಾದರು'' ಎಂದು ಕಿರಣ್ ಬಾವಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.