ಹಾಟ್‌ಶಾಟ್ ಆ್ಯಪ್‌ನಲ್ಲಿ ರಾಜ್ ಕುಂದ್ರಾ ಸೋದರ ಮಾವ ಭಾಗಿ: ಪೊಲೀಸರಿಗೆ ಶಿಲ್ಪಾ ಶೆಟ್ಟಿ ಹೇಳಿಕೆ
ತಮ್ಮ ಪತಿ ರಾಜ್ ಕುಂದ್ರಾ ಅವರ ಸೋದರ ಮಾವ, ಲಂಡನ್ ಮೂಲದ ಪ್ರದೀಪ್ ಬಕ್ಷಿ ಹಾಟ್‌ಶಾಟ್ ಆ್ಯಪ್ ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಶುಕ್ರವಾರ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.
Published: 24th July 2021 01:18 PM | Last Updated: 24th July 2021 01:52 PM | A+A A-

ಶಿಲ್ಪಾ ಶೆಟ್ಟಿ - ರಾಜ್ ಕುಂದ್ರಾ
ಮುಂಬೈ: ತಮ್ಮ ಪತಿ ರಾಜ್ ಕುಂದ್ರಾ ಅವರ ಸೋದರ ಮಾವ, ಲಂಡನ್ ಮೂಲದ ಪ್ರದೀಪ್ ಬಕ್ಷಿ ಹಾಟ್‌ಶಾಟ್ ಆ್ಯಪ್ ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಶುಕ್ರವಾರ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಹಾಟ್‌ಶಾಟ್ ಆ್ಯಪ್ ನಿಖರವಾದ ವಿಷಯದ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.
ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಪತ್ನಿ ಶಿಲ್ಪಾ ಶೆಟ್ಟಿ ಅವರನ್ನು ನಿನ್ನೆ ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಪ್ರಧಾನ ಆರೋಪಿಯಾಗಿದ್ದಾರೆ. ಆದರೆ ಶಿಲ್ಪಾ ಶೆಟ್ಟಿ ಮಾತ್ರ ತಮ್ಮ ಪತಿ ನಿರಪರಾಧಿ ಮತ್ತು ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಹಾಟ್‌ಶಾಟ್ ಆ್ಯಪ್ ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಿರುವುದು ಲಂಡನ್ ಮೂಲದ ಪ್ರದೀಪ್ ಬಕ್ಷಿ ಎಂದು ನಟಿ ಹೇಳಿದ್ದಾರೆ.
ಪೊಲೀಸರು ಶಿಲ್ಪಾ ಶೆಟ್ಟಿ ಅವರನ್ನು ಅವರ ಜೂಹು ನಿವಾಸದಲ್ಲಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂದ್ರಾ ಅವರನ್ನು ಜುಲೈ 19 ರ ರಾತ್ರಿ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.