ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಕಿರುತೆರೆ ನಟ ಪರ್ಲ್ ಪುರಿ ಬಂಧನ

ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಪರ್ಲ್ ವಿ ಪುರಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 
ಪರ್ಲ್ ಪುರಿ
ಪರ್ಲ್ ಪುರಿ

ಮುಂಬಯಿ: ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಪರ್ಲ್ ವಿ ಪುರಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 

'ನಾಗಿನ್ 3', 'ನಾಗಾರ್ಜುನ ಏಕ್ ಯೋಧ', 'ಬೆಪನಾಹ್ ಪ್ಯಾರ್', 'ಬ್ರಹ್ಮರಾಕ್ಷಸ್ 2' ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಪರ್ಲ್ ಪುರಿಯನ್ನು ಮುಂಬಯಿಯ ಅಂಬೋಳಿ ಪೊಲೀಸರು ನೆರವಿನೊಂದಿಗೆ ಮಿರಾ ಭಾಯಂದಾರ್ ವಾಸಾಯಿ ವಿರಾರ್ ಪೊಲೀಸರು ಬಂಧಿಸಿದ್ದಾರೆ. 

ಅಪ್ರಾಪ್ತೆ ಮತ್ತು ಆಕೆಯ ಕುಟುಂಬಸ್ಥರು ದಾಖಲಿಸಿದ ದೂರಿನ ಆಧಾರದ ಮೇಲೆ ನಟನ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಟನ ವಿರುದ್ಧ ಐಪಿಸಿ ಸೆಕ್ಷನ್ 376 ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com