ಜಾವೇದ್ ಅಖ್ತರ್ ಮಾನನಷ್ಟ ಪ್ರಕರಣ: ನಟಿ ಕಂಗನಾ ರನೌತ್ ವಿರುದ್ಧ ವಾರಂಟ್ ಜಾರಿ
ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮುಂಬೈ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಬಾಲಿವುಡ್ ಗೀತರಚನೆಗಾರ ಜಾವೇದ್ ಅಖ್ತರ್ ಕಂಗನಾ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನಟಿ ವಿರುದ್ಧ ನ್ಯಾಯಾಲಯ ಈ ಕ್ರಮ ತೆಗೆದುಕೊಂಡಿದೆ.
Published: 01st March 2021 03:18 PM | Last Updated: 01st March 2021 03:19 PM | A+A A-

ಜಾವೇದ್ ಅಖ್ತರ್, ಕಂಗನಾ ರನೌತ್
ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮುಂಬೈ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಬಾಲಿವುಡ್ ಗೀತರಚನೆಗಾರ ಜಾವೇದ್ ಅಖ್ತರ್ ಕಂಗನಾ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನಟಿ ವಿರುದ್ಧ ನ್ಯಾಯಾಲಯ ಈ ಕ್ರಮ ತೆಗೆದುಕೊಂಡಿದೆ.
ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಫೆಬ್ರವರಿ 1ರಂದು ಕಂಗನಾಗೆ ಸಮನ್ಸ್ ಜಾರಿ ಮಾಡಿತ್ತು.ಅಲ್ಲದೆ ಮಾರ್ಚ್ 1ರಂದು ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿತ್ತು. ಆದರೆ ಕಂಗನಾ ಸೋಮವಾರ ನ್ಯಾಯಾಲಯಕ್ಕೆ ಬಂದಿರಲಿಲ್ಲ.
ಇದಕ್ಕಾಗಿ ನಟಿ ವಿರುದ್ಧ ವಾರಂಟ್ ಹೊರಡಿಸಿರುವ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 22ಕ್ಕೆ ನಿಗದಿ ಮಾಡಿದೆ.
ಕಳೆದ ತಿಂಗಳು, ಪೊಲೀಸರು ನಟಿಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ತನ್ನ ವಿರುದ್ಧ ಆಧಾರರಹಿತ ಮತ್ತು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಅಖ್ತರ್ ಕಂಗನಾ ವಿರುದ್ಧ ದೂರು ನೀಡಿದ್ದು, ದೂರಿನಲ್ಲಿ ಅಖ್ತರ್ ತಮ್ಮ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ್ದಾರ್ರೆ.