ಕೊರೋನಾ ಎರಡನೇ ಡೋಸ್ ಲಸಿಕೆ ಪಡೆದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್
ಕೊರೋನಾ ಎರಡನೇ ಅಲೆ ಇಡೀ ದೇಶವನ್ನೇ ತತ್ತರಿಸಿದೆ. ಹೀಗಿರುವಾಗ ಕೊರೋನಾ ವೈಸರ್ ನಿಂದ ಕಾಪಾಡಿಕೊಳ್ಳಬೇಕಾದರೆ ಲಸಿಕೆ ಹಾಕಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ವಿಚಾರದಲ್ಲಿ ಬಾಲಿವುಡ್ ತಾರೆಯರು ಬಹಳ ಎಚ್ಚರಿಕೆಯಿಂದಿದ್ದಾರೆ.
Published: 16th May 2021 10:28 AM | Last Updated: 16th May 2021 10:28 AM | A+A A-

ಲಸಿಕೆ ಪಡೆಯುತ್ತಿರುವ ಅಮಿತಾಭ್ ಬಚ್ಚನ್
ಮುಂಬೈ: ಕೊರೋನಾ ಎರಡನೇ ಅಲೆ ಇಡೀ ದೇಶವನ್ನೇ ತತ್ತರಿಸಿದೆ. ಹೀಗಿರುವಾಗ ಕೊರೋನಾ ವೈಸರ್ ನಿಂದ ಕಾಪಾಡಿಕೊಳ್ಳಬೇಕಾದರೆ ಲಸಿಕೆ ಹಾಕಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ವಿಚಾರದಲ್ಲಿ ಬಾಲಿವುಡ್ ತಾರೆಯರು ಬಹಳ ಎಚ್ಚರಿಕೆಯಿಂದಿದ್ದಾರೆ.
ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಅವರು ಎರಡನೇ ಡೋಸ್ ಲಸಿಕೆ ತೆಗೆದುಕೊಳ್ಳುವ ಮೂಲಕ ಈದ್ ಆಚರಿಸಿಕೊಂಡಿದ್ದರು. ಇದೀಗ, ಅಮಿತಾನ್ ಬಚ್ಚನ್ ಕೂಡಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಲಸಿಕೆ ಹಾಕಿಸಿಕೊಳ್ಳುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿರುವ ಅಮಿತಾಬ್ ಅವರು, ಲಸಿಕೆಯ ಎರಡನೇಯ ಡೋಸ್ ಹಾಕಿಸಿರುವುದನ್ನು ಖಚಿತಪಡಿಸಿದ್ದಾರೆ.