ಕ್ಯಾಲಿಫೋರ್ನಿಯಾ ವಿವಿ ಪದವಿ ಪಡೆದ ನಟ ಶಾರೂಕ್ ಖಾನ್ ಪುತ್ರ ಆರ್ಯನ್, ಫೋಟೋ ವೈರಲ್
ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Published: 18th May 2021 01:32 PM | Last Updated: 18th May 2021 01:32 PM | A+A A-

ಆರ್ಯನ್ ಖಾನ್
ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರ್ಯನ್ ಸಮಾರಂಭದ ಉಡುಪು ಧರಿಸಿ ಕೈನಲ್ಲಿ ಸರ್ಟಿಫಿಕೇಟ್ ಹಿಡಿದುಕೊಂಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇತ್ತೀಚೆಗಷ್ಟೇ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆದಿತ್ತು.
ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರಧಾನ ಸಮಾರಂಭ ನಡೆಸಲಾಯಿತು. ಈ ಸಮಾರಂಭದಲ್ಲಿ ಆರ್ಯನ್ ಸಹ ಭಾಗಿಯಾಗಿದ್ದರು.
ತಂದೆ ನಟನಾಗಿರುವುದರಿಂದ ಮಗ ಸಹ ಸಿನಿಮಾ ಕ್ಷೇತ್ರದಲ್ಲೇ ಮುಂದುವರೆಯ ಸೂಚನೆಗಳು ಸಿಕ್ಕಿವೆ. ಇದಕ್ಕೆ ಕಾರಣ ಆರ್ಯನ್ ತೆಗೆದುಕೊಂಡಿರುವ ಕೋರ್ಸ್ ಗಳು. ಹೌದು ಆರ್ಯನ್ 2020ರ ಬ್ಯಾಚನ್ ಬ್ಯಾಚುಲರ್ ಆಫ್ ಫೈನ್ ಆರ್ಟ್ಸ್, ಸಿನಿಮ್ಯಾಟಿಕ್ ಆರ್ಟ್ಸ್, ಫಿಲ್ಮ್ ಅಂಡ್ ಟೆಲಿವಿಷನ್ ಪ್ರೊಡಕ್ಷನ್, ಸ್ಕೂಲ್ ಆಫ್ ಸಿನಿಮ್ಯಾಟಿಕ್ ಆರ್ಟ್ಸ್ ನಲ್ಲಿ ಪದವಿ ಪಡೆದಿದ್ದಾರೆ.