ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಶಿಲಾದಿತ್ಯ ದಂಪತಿಗೆ ಗಂಡು ಮಗು ಜನನ

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಭಾರತೀಯ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್
ಭಾರತೀಯ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ಶಿಲಾದಿತ್ಯ ಹಾಗೂ ಶ್ರೇಯಾ ಘೋಷಾಲ್ ದಂಪತಿಗೆ ಇಂದು ಮಧ್ಯಾಹ್ನ ಗಂಡು ಮಗು ಜನಿಸಿದ್ದು ಇದನ್ನು ಗಾಯಕಿ ಶ್ರೇಯಾ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 

ಭಗವಂತ ನನಗೆ ಇಂದು ಗಂಡು ಮಗುವನ್ನು ಆಶೀರ್ವದಿಸಿದ್ದಾನೆ. ಹಿಂದೆಂದೂ ಇಂತಹ ಭಾವನೆಯನ್ನು ಅನುಭವಿಸಿರಲಿಲ್ಲ. ನನ್ನ ಪತಿ ಶೀಲಾದಿತ್ಯ ಹಾಗೂ ಕುಟುಂಬಸ್ಥರು ಸಂತೋಷಗೊಂಡಿದ್ದಾರೆ. ಇನ್ನು ಬೆಲೆ ಕಟ್ಟಲಾಗದ ನಿಮ್ಮ ಆಶೀರ್ವಾದಕ್ಕೆ ಧನ್ಯವಾದಗಳು ಎಂದು ಶ್ರೇಯಾ ಘೋಷಾಲ್ ಬರೆದುಕೊಂಡಿದ್ದಾರೆ. 

2015ರ ಫೆಬ್ರವರಿಯಲ್ಲಿ ಬಂಗಾಳಿ ಶೈಲಿಯಲ್ಲಿ ಶ್ರೇಯಾ ಮತ್ತು ಶಿಲಾದಿತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com